ಅಹಮದಾಬಾದ, ೨೪- ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗಳಿಗೆ ಇನ್ನು ಕೆಲ ದಿನಗಳಲ್ಲಿಯೇ ಮತದಾನ ನಡೆಯಲಿದ್ದು, ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ಕಾರ್ಯ ನಡೆಸುತ್ತಿವೆ.
ಈ ನಡುವೆ ಗುಜರಾತಿನ ರಾಜಕೋಟ ಜಿಲ್ಲೆಯ ಗ್ರಾಮವು ಒಂದು ವಿಶಿಷ್ಟ ಕಾರಣಕ್ಕಾಗಿ ಎಲ್ಲರ ಗಮನ ಸೆಳೆಯುತ್ತಿದೆ. ರಾಜಕೋಟನಿಂದ ಕೇವಲ 20 ಕಿಮೀ ದೂರದಲ್ಲಿರುವ ರಾಜ್ ಸಮಾಧಿಯಾಲ ಗ್ರಾಮದಲ್ಲಿ ಮತ ಚಲಾಯಿಸದವರಿಗೆ ದಂಡ ವಿಧಿಸಲಾಗುತ್ತದೆ.
ಈ ಗ್ರಾಮದ ಮತದಾರರು ಕಡ್ಡಾಯವಾಗಿ ಮತ ಚಲಾವಣೆ ಮಾಡಬೇಕೆಂಬ ನಿಯಮವಿದ್ದು, ಸಕಾರಣವಿಲ್ಲದೇ ಇದನ್ನು ಉಲ್ಲಂಘಿಸಿದವರಿಗೆ 51 ರೂಪಾಯಿಗಳ ದಂಡ ವಿಧಿಸಲಾಗುತ್ತದೆ. ಮತ್ತೊಂದು ಮಹತ್ವದ ಸಂಗತಿ ಎಂದರೆ 1983 ರಿಂದ ಈ ಗ್ರಾಮದಲ್ಲಿ ಯಾವುದೇ ಪಕ್ಷಕ್ಕೆ ಪ್ರಚಾರ ನಡೆಸಲು ಅವಕಾಶ ನೀಡಿಲ್ಲ.