Please assign a menu to the primary menu location under menu

Crime News

ಧಾರವಾಡ; ಮಕ್ಕಳ ಕಳ್ಳನೆಂದು ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಜನ


ಧಾರವಾಡ : ಮಕ್ಕಳ ಕಳ್ಳನೆಂದು ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ಧಾರವಾಡ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ.

ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳರು ಬರ್ತಿದ್ದಾರೆ ಎಂದು ಸುಳ್ಳು ಸುದ್ದಿ ಓಡಾಡುತ್ತಿದ್ದು ಇದನ್ನ ನಂಬಿದ ಗ್ರಾಮಸ್ಥರು, ಹಿಂದಿ ಮಾತನಾಡುತ್ತ ಗ್ರಾಮದಲ್ಲಿ ಓಡಾಡುತ್ತಿದ್ದ ವ್ಯಕ್ತಿಯ ಮೇಲೆ ಅನುಮಾನಗೊಂಡು ಗ್ರಾಮದಲ್ಲಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ.

ನಂತರ ಪೊಲೀಸರಿಗೆ ವಿಷಯ ಮುಟ್ಟಿಸಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಲ್ಲೆಗೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 


Samadarshi News

Leave a Reply