ಮಂಗಳೂರು: ಮಂಗಳೂರಿನ ನಾಗುರಿ ಬಳಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಬೆನ್ನಲ್ಲೇ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬ್ಯಾಗ್ ಒಂದು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ.
ಮಂಗಳೂರಿನ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ವಾರಸುದಾರರಿಲ್ಲದ ಬ್ಯಾಗ್ ಪತ್ತೆಯಾಗಿದ್ದು, ಸ್ಥಳದಲ್ಲಿ ಕೆಲ ಕಾಲ ಆತಂಕ ಎದುರಾಗಿದೆ. ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಬ್ಯಾಗ್ ಪರಿಶೀಲನೆ ನಡೆಸಿದರು.
ಬ್ಯಾಗ್ ನಲ್ಲಿ ಯಾವುದೇ ಅಪಾಯಕಾರಿ ವಸ್ತುಗಳಾಗಲಿ, ಸ್ಫೋಟಕಗಳಾಗಲಿ ಪತ್ತೆಯಾಗಿಲ್ಲ. ಬ್ಯಾಗ್ ನಲ್ಲಿ ಹಳೇ ಬಟ್ಟೆ, ಕೆಲ ಪಾತ್ರೆಗಳು ಇದ್ದವು. ಯಾರೋ ಪ್ರಯಾಣಿಕರು ಬ್ಯಾಗ್ ನ್ನು ಮರೆತು ಬಿಟ್ಟುಹೋಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.