This is the title of the web page

ಮೆದುಳು ಸಂಶೋಧನಾ ಕೇಂದ್ರ ಉದ್ಘಾಟಿಸಿದ ಪ್ರಧಾನಿ 

 

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿನ ಐಐಎಸ್ಸಿಯಲ್ಲಿ ಮೆದುಳು ಸಂಶೋಧನಾ ಕೇಂದ್ರ ಉದ್ಘಾಟಿಸಿದರು.

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಬಂದಿಳಿದ ಪ್ರಧಾನಿ ಮೋದಿಯವರನ್ನು ಮುಖ್ಯಮಂತ್ರಿ ಬೊಮ್ಮಾಯಿ, ರಾಜ್ಯಪಾಲ ಥಾವರಚಂದ ಗೆಹ್ಲೋಟ್, ರಾಜ್ಯ ಬಿಜೆಪಿ ನಾಯಕರು ಸ್ವಾಗತಿಸಿದರು.

ಭಾರತೀಯ ವಿಜ್ಞಾನ ಭವನದಲ್ಲಿ ಮೆದುಳು ಸಂಶೋಧನಾ ಕೇಂದ್ರವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಇದಕ್ಕೂ ಮುನ್ನ ಮೇಖ್ರಿ ಸರ್ಕಲ್ ಬಳಿ ಪ್ರಧಾನಿ ಮೋದಿ ಆಗಮಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಮೋದಿ… ಮೋದಿ…ಎಂದು ಜಯಘೋಷಗಳನ್ನು ಕೂಗಿ ಸಂಭ್ರಮಿಸಿದರು. ಈ ವೇಳೆ ಪ್ರಧಾನಿ ಮೋದಿ ವಾಹನ ನಿಲ್ಲಿಸಿ ಜನರತ್ತ ಕೈ ಬೀಸಿ ಧನ್ಯವಾದಗಳನ್ನು ಸಲ್ಲಿಸಿದರು.

You might also like
Leave a comment