This is the title of the web page

ಇಸ್ರೇಲ್ ಪ್ರಧಾನಿಗೆ ಕೊರೋನಾ; ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ ದಿಢೀರ್ ರದ್ದು

ಬೆಂಗಳೂರು, ೨೮- ಎಪ್ರಿಲ್ ೫ರಂದು ಕರ್ನಾಟಕಕ್ಕೆ ಬರಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರವಾಸ ದಿಢೀರ್ ರದ್ದಾಗಿದೆ.

ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಗೆ ಕೊರೋನಾ ಸೋಂಕು ತಗುಲಿದ್ದರಿಂದ ಪ್ರಧಾನಿ ಮೋದಿ ಅವರ ರಾಜ್ಯ ಪ್ರವಾಸ ರದ್ದು ಮಾಡಲಾಗಿದೆ.

ಏಪ್ರಿಲ್ 5ರಂದು ಮೂರು ಕಾರ್ಯಕ್ರಮಗಳ ಉದ್ಘಾಟನೆಗಾಗಿ ಪ್ರಧಾನಿ ಮೋದಿ ಅವರು ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಜೊತೆ ಕರ್ನಾಟಕಕ್ಕೆ ಬರುವ ಕಾರ್ಯಕ್ರಮ ಇತ್ತು. ಆದರೆ ನಫ್ತಾಲಿಗೆ ಕೊರೋನಾ ಕಾಣಿಸಿಕೊಂಡಿದ್ದರಿಂದ ಅವರನ್ನು ಕ್ವಾರಂಟೈನ್ ಮಾಡಲಾಗಿದೆ. ಹೀಗಾಗಿ ಅವರ ಭಾರತ ಪ್ರವಾಸ ರದ್ದುಗೊಂಡಿದೆ.

ಪ್ರಧಾನಿ ಮೋದಿ ಅವರು ಸಹ ರಾಜ್ಯದಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಲೋಕಾರ್ಪಣೆ, ಮೇಲ್ದರ್ಜೆಗೇರಿಸಿದ 150 ಐಟಿಐ ಉದ್ಘಾಟನೆ ಕಾರ್ಯಕ್ರಮ ಮತ್ತು ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮಗಳಿದ್ದವು.

You might also like
Leave a comment