ಹೊಸದಿಲ್ಲಿ, : ತೀವ್ರ ಹೃದಯಾಘಾತದಿಂದ ಆಹಾರ ಇಲಾಖೆ ಸಚಿವ ಉಮೇಶ ಕತ್ತಿ(61) ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಉಮೇಶ ಕತ್ತಿ ಅವರ ಅಕಾಲಿಕ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಮೋದಿ ಟ್ವೀಟ್ ಮಾಡಿ, ಉಮೇಶ ಕತ್ತಿಜೀ ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಈ ದುರಂತದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಬೆಂಬಲಿಗರೊಂದಿಗೆ ಇವೆ. ಓಂ ಶಾಂತಿ ಎಂದು ಸಂತಾಪ ಸೂಚಿಸಿದ್ದಾರೆ.
ಕತ್ತಿ ಅವರ ಅಕಾಲಿಕ ನಿಧನಕ್ಕೆ ರಾಜ್ಯ ಹಾಗೂ ರಾಷ್ಟ್ರ ಮಟ್ಟ ನಾಯಕರು ಸಂತಾಪ ಸೂಚಿಸಿದ್ದಾರೆ.

