This is the title of the web page

ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ : ಹಲವು ಶಿಕ್ಷಣ ಸಂಸ್ಥೆಗಳಿಗೆ ರಜೆ 

 

ಬೆಂಗಳೂರು: ನಾಳೆ ಪ್ರಧಾನಿ ಮೋದಿ ಅವರು ಬೆಂಗಳೂರು ಮತ್ತು ಮೈಸೂರಿಗ ಭೇಟಿ ನೀಡಲಿದ್ದು, ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಈ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಪ್ರಧಾನಿ ಮೋದಿ ಸಂಚರಿಸಲಿರುವ ಮಾರ್ಗಗಳಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದೆ.

ಪ್ರಧಾನಿ ಮೋದಿ ಸಂಚರಿಸಲಿರುವ ಮಾರ್ಗದಲ್ಲಿ ಸಿಗುವ ಐಐಎಸ್‌ಸಿ, ಗೊರಗುಂಟೆಪಾಳ್ಯ, ರಿಂಗ್‌ ರಸ್ತೆ, ಡಾ ರಾಜ್‌ಕುಮಾರ್‌ ಸ್ಮಾರಕ ಮೇಲ್ಸೇತುವೆ, ಲಗ್ಗೆರೆ ಸೇತುವೆ, ನಾಯಂಡಹಳ್ಳಿ, ಮೈಸೂರು ರಸ್ತೆ ಆರ್‌ವಿ ಕಾಲೇಜು, ನಾಗರಬಾವಿ, ಸುಮನಹಳ್ಳಿ ಮೇಲ್ಸೇತುವೆ, ಗೋವರ್ಧನ ಟಾಕೀಸ್, ಯಶವಂತಪುರ ಮತ್ತು ಜಕ್ಕೂರು ಏರೋಡ್ರೋಮ್ ಮಾರ್ಗಗಳ ಸುತ್ತಮುತ್ತಲಿನ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಇದು ಅನ್ವಯಿಸುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಧಾನಿ ಮೋದಿಯವರ ಬೆಂಗಳೂರು ಮತ್ತು ಮೈಸೂರು ಭೇಟಿಯನ್ನು ಯಶಸ್ವಿ ಮಾಡಲು ಸಿದ್ಧತೆಗಳು ಭರದಿಂದ ಸಾಗುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

You might also like
Leave a comment