Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

Crime News

ಜೂಜು ಅಡ್ಡೆಯ ಮೇಲೆ ದಾಳಿ ಮುಚ್ಚಿಟ್ಟ ಪೊಲೀಸರು ಅಮಾನತ್ತು 


ವಿಜಯನಗರ: ಇಸ್ಪಿಟ್ ಅಡ್ಡೆಯ ಮೇಲೆ ದಾಳಿ ಮಾಡಿದ ನಂತರ, ಕಾನೂನು ಕ್ರಮ ಕೈಗೊಳ್ಳದೇ ದಾಳಿ ನಡೆಸಿದ ಆ ವಿಷಯವನ್ನೇ ಮುಚ್ಚಿಟ್ಟು, ದಾಳಿಯೇ ನಡೆದಿಲ್ಲ ಎಂಬ ನಡೆಯನ್ನು ಪೊಲೀಸರು ತೋರಿದ್ದಾರೆ.

ಈ ಹಿನ್ನಲೆಯಲ್ಲಿ ಪೊಲೀಸರ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡಿ ಗ್ರಾಮಸ್ಥರೇ ಶಾಕ್ ನೀಡಿದ್ದಾರೆ.

ದೀಪಾವಳಿ ಹಬ್ಬದಂದು ಇಸ್ಪಿಟ್ ಆಡುತ್ತಿದ್ದ ಜೂಜುಕೋರರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಮೂವರು ಜೂಜುಕೋರರಿಂದ 20 ಸಾವಿರ ಹಣ ಹಾಗೂ ಮೊಬೈಲ್ ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಸ್ಥಳೀಯರಾದ ವೆಂಕಟೇಶ್ ಎಂಬುವರು ಠಾಣೆಗೆ ತೆರಳಿ ದೂರು ದಾಖಲಾದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಠಾಣೆಯಲ್ಲಿ ದೂರು ದಾಖಲಾಗಿಲ್ಲ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದರೂ, ಪ್ರಕರಣ ದಾಖಲಿಸದ ಪೊಲೀಸರ ವಿರುದ್ಧ ವೆಂಕಟೇಶ ಅವರು​​ ನಾಲ್ವರು ಪೊಲೀಸ್​​ ಪೇದಗಳ ವಿರುದ್ಧ ಹೊಸಪೇಟೆ ಪಟ್ಟಣ ಪೊಲೀಸ್​​ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ನಾಲ್ವರು ಪೇದೆಗಳಾದ ಮಹೇಶ, ಅಭಿಷೇಕ, ಮಂಜುನಾಥ, ಶ್ರೀಕಾಂತರನ್ನು ಪೊಲೀಸರು ನ್ಯಾಯಾಲಕ್ಕೆ ಹಾಜರು ಪಡಿಸಿದ್ದಾರೆ.

ನ್ಯಾಯಾಲಯವು ನಾಲ್ವರು ಪೇದೆಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ನಂತರ ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ನಾಲ್ವರು ಪೇದೆಗಳನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ ವರಿಷ್ಠ ಡಾ. ಕೆ ಅರುಣ ಆದೇಶ ಹೊರಡಿಸಿದ್ದಾರೆ.


A B Dharwadkar
the authorA B Dharwadkar

Leave a Reply