ಬೆಂಗಳೂರು : ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿರುವ 40% ಕಮಿಷನ್ ಆರೋಪ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಪ್ರಕರಣಗಳ ತನಿಖೆ ನಡೆಸಲು ಲೋಕಾಯುಕ್ತ ಎಂಬ ಸ್ವಾಯತ್ತ ಸಂಸ್ಥೆ ಇದೆ ಇತ್ತೀಚೆಗೆ ಕರ್ನಾಟಕ ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರವನ್ನು ಲೋಕಾಯುಕ್ತಕ್ಕೆ ನೀಡಲಾಗಿತ್ತು.
ಆ ಸಂಸ್ಥೆಯಲ್ಲಿ ಯಾರ ವಿರುದ್ಧವಾದರೂ ದೂರುಗಳನ್ನು ನೀಡುವ ಅಧಿಕಾರ ಎಲ್ಲರಿಗೂ ಇದೆ. ಆದರೆ, ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಇನ್ನು ಕೆಂಪಣ್ಣ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಕಮಿಷನ್ ಆರೋಪ ಮಾಡಿದ್ದಾರೆ. ಜೊತೆಗೆ ಎಲ್ಲಾ ಪಕ್ಷಗಳ ಶಾಸಕರು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಹೇಳುತ್ತಾರೆ. ಹಿಂದಿನ ಸರ್ಕಾರದಲ್ಲಿ ಈ ಹಗರಣ ನಡೆದಿದ್ದವು ಆದರೆ ಏಕೆ ಬೆಳಕಿಗೆ ಬರಲಿಲ್ಲ ಎಂದು ಪ್ರಶ್ನಿಸಿದರು.