This is the title of the web page

ಇಂದಿನಿಂದ ಎರಡು ದಿನ ಪ್ರಧಾನಿ ರಾಜ್ಯ ಪ್ರವಾಸ : ಕಾರ್ಯಕ್ರಮ ವಿವರ 

 

ಬೆಂಗಳೂರು:  ಒಂದೂವರೆ ವರ್ಷಗಳ ಬಳಿಕ ಪ್ರಧಾನಿ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಲಿದ್ದು, 20 ಗಂಟೆಯಲ್ಲಿ ಬೆಂಗಳೂರು, ಮೈಸೂರಿನ 10 ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿ ಅಧಿಕಾರಿ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರು ನಾಳೆ ಬೆಳಗ್ಗೆ ಮೈಸೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ 8 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಸಾಮೂಹಿಕ ಪ್ರದರ್ಶನದಲ್ಲಿ ಭಾಗವಹಿಸಲಿದ್ದಾರೆ.

ಈ ವೇಳೆ ಪ್ರಧಾನಿ ಮೋದಿ ಅವರೊಂದಿಗೆ 75 ಮಂದಿ ಕೇಂದ್ರ ಸಚಿವರು ದೇಶದ ವಿವಿಧೆಡೆ 75 ಪ್ರಮುಖ ಸ್ಥಳಗಳಲ್ಲಿ ಯೋಗ ಪ್ರದರ್ಶನ ಮಾಡಲಿದ್ದಾರೆ.

ಪ್ರಧಾನಿ ಮೋದಿ ಅವರು ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು, ಜೂನ್ 20, 21 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ವೇಳಾಪಟ್ಟಿ ಬಿಡುಗಡೆಗೊಂಡಿದೆ.

 

ಜೂನ್ 20

ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಆಗಮನ

 

ಮಧ್ಯಾಹ್ನ 12.30ಕ್ಕೆ ಬೆಂಗಳೂರು ಸಬ ಅರ್ಬನ್ ರೈಲು ಯೋಜನೆಗೆ ಶಂಕು ಸ್ಥಾಪನೆ

 

ಮಧ್ಯಾಹ್ನ 2.30ಕ್ಕೆ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟನೆ

 

ಸಂಜೆ 4.50ಕ್ಕೆ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣ

 

ಸಂಜೆ 5 ಗಂಟೆಗೆ ಮೈಸೂರು ವಾಕ್ ಶ್ರವಣ ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗಿ

 

ಸಂಜೆ 6.30ಕ್ಕೆ ಸುತ್ತೂರಿನಲ್ಲಿ ವೇದ ಪಾಠಶಾಲೆ ಕಟ್ಟಡ ಲೋಕಾರ್ಪಣೆ

 

ರಾತ್ರಿ 7.30 ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ

 

ಜೂನ್ 21

 

ಬೆಳಗ್ಗೆ 6.30 ಕ್ಕೆ ಅರಮನೆ ಮುಂಭಾಗ ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗಿ

 

ಬೆಳಗ್ಗೆ 9.25 ಕ್ಕೆ ಮೈಸೂರಿನಿಂದ ಕೇರಳದ ತಿರುವನಂತಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

You might also like
Leave a comment