Live Stream

November 2022
W T F S S M T
 1
2345678
9101112131415
16171819202122
23242526272829
30  

| Latest Version 8.2.9 |

National News

‘ಭಾರತ ಜೋಡೋ ಯಾತ್ರೆ’ಯಲ್ಲಿ ಪತಿ, ಮಕ್ಕಳೊಂದಿಗೆ ಭಾಗಿಯಾದ ಪ್ರಿಯಾಂಕಾ ಗಾಂಧಿ


ಭೋಪಾಲ, ೨೪- ಇಂದು ಬೆಳಿಗ್ಗೆ ಭಾರತ ಜೋಡೋ ಯಾತ್ರೆ ಮಧ್ಯಪ್ರದೇಶದ ಮೂಲಕ ಸಾಗುತ್ತಿದ್ದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಅವರ ಕುಟುಂಬ ಸದಸ್ಯರು ಅವರ ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ.

ಸೆಪ್ಟೆಂಬರ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಹೊರಟಿರುವ ಯಾತ್ರೆಯಲ್ಲಿ ಇದೇ ಮೊದಲ ಬಾರಿಗೆ ಉತ್ತರ ಪ್ರದೇಶದ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಗವಹಿಸಿದ್ದಾರೆ.

ಪ್ರಿಯಾಂಕಾ ಮತ್ತು ರಾಹುಲ್ ಗಾಂಧಿ ಜೊತೆಯಾಗಿ ನಡೆಯುತ್ತಿರುವ ಚಿತ್ರವನ್ನು ಕಾಂಗ್ರೆಸ್ ಹಂಚಿಕೊಂಡಿದ್ದು, ನಾವು ಒಟ್ಟಿಗೆ ನಡೆದಾಗ ನಮ್ಮ ಹೆಜ್ಜೆಗಳು ಬಲವಾಗಿರುತ್ತವೆ ಎಂದು ಬರೆಯಲಾಗಿದೆ.

ಪ್ರಿಯಾಂಕಾ ಗಾಂಧಿ ಮತ್ತು ಅವರ ಪತಿ ರಾಬರ್ಟ ವಾದ್ರಾ ಯಾತ್ರೆ ಆರಂಭವಾದಾಗಿನಿಂದ ಮೊದಲ ಬಾರಿಗೆ ಗುರುವಾರ ಭಾರತ ಜೋಡೋ ಯಾತ್ರೆಗೆ ಸೇರಿದರು. ಅವರ ಪುತ್ರ ರೇಹಾನ್ ವಾದ್ರಾ ಕೂಡ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

ಇಂದು ಬೆಳಿಗ್ಗೆ ಮಧ್ಯಪ್ರದೇಶದ ಬೋರಗಾಂವ ಗ್ರಾಮದಿಂದ ಪುನರಾರಂಭಗೊಂಡ ಭಾರತ ಜೋಡೋ ಯಾತ್ರೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಸಚಿನ ಪೈಲಟ್ ಸಹ ಭಾಗಿಯಾಗಿದ್ದಾರೆ. ಹಿರಿಯ ನಾಯಕರಾದ ಕಮಲ ನಾಥ ಮತ್ತು ದಿಗ್ವಿಜಯ ಸಿಂಗ್ ಕೂಡ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.


Leave a Reply