ಬಾಗಲಕೋಟ : ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ರಾಜ್ಯ ರೈತ ಸಂಘವು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದೆ. ಜಿಲ್ಲಾಧಿಕಾರಿಗಳ ಸಭೆ ವಿಫಲವಾದ ಹಿನ್ನೆಲೆಯಲ್ಲಿ ಆಕ್ರೋಶ ಭುಗಿಲೆದ್ದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಬಾಗಲಕೋಟ ಜಿಲ್ಲೆಯಾದ್ಯಂತ ಇಂದಿನಿಂದ ನಾಲ್ಕು ದಿನ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.
ಇಂದಿನಿಂದ ನ.19 ರ ಮಧ್ಯರಾತ್ರಿವರೆಗೆ ಬಾಗಲಕೋಟ ಜಿಲ್ಲೆಯಾದ್ಯಂತ ಇಂದಿನಿಂದ ನಾಲ್ಕು ದಿನ ಮುನ್ನೆಚ್ಚರಿಕೆ ಕ್ರಮವಾಗಿ ಬಾಗಲಕೋಟ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ ಎಂದು ಬಾಗಲಕೋಟ ಜಿಲ್ಲಾಧಿಕಾರಿ ಪಿ ಸುನೀಲ ಕುಮಾರ ತಿಳಿಸಿದ್ದಾರೆ.
ಜೊತೆಗೆ ಬಾಗಲಕೋಟ ಜಿಲ್ಲಾದ್ಯಂತ ಇಂದಿನಿಂದ ನವೆಂಬರ 19 ರ ಮಧ್ಯರಾತ್ರಿ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾಡಳಿತದಿಂದ ಈ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ.
ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ರಾಜ್ಯ ರೈತ ಸಂಘವು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದೆ. ಈ ಹಿನ್ನೆಲೆ ಇಂದು ಮುಧೋಳ ನಗರ ಬಂದ್ ಕರೆ ಕೂಡ ನೀಡಲಾಗಿತ್ತು.
ನಗರದ ಬಹುತೇಕ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿದ್ದವು. ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ಮುಧೋಳ ತಾಲೂಕಿನ ಅನೇಕ ಭಾಗಗಳಲ್ಲಿ ರೈತರು ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.