This is the title of the web page

ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಪ್ರತಿಭಟನೆ

ಬೆಳಗಾವಿ, 7- ಮುಸ್ಲಿಮ ಮಹಿಳೆಯರ ಹಿಜಾಬ್ ಆಚರಣೆಯನ್ನು ಬೆಂಬಲಿಸಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಮ್ರಾನ್ ತಪಕೀರ್ ಅವರು ಈ ಸಂದರ್ಭದಲ್ಲಿ ಮಾತನಾಡಿ, ಮಾನ್ಯ ಭಾರತದ ರಾಷ್ಟ್ರಪತಿಗಳಿಗೆ ಈ ಸಂಬಂಧ ಮನವಿ ಅರ್ಪಿಸಲಾಗುತ್ತಿದ್ದು ತಮ್ಮ ಸಮುದಾಯಕ್ಕೆ ನ್ಯಾಯ ದೊರೆಯದಿದ್ದರೆ ಬೀದಿಗಿಳಿದು ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕೆಲ ಪಟ್ಟಭದ್ರ ಹಿತಾಸಕ್ತ ಧರ್ಮಾಂಧ ಶಕ್ತಿಗಳು ಮುಸ್ಲಿಮ ಮಹಿಳೆಯರ ಧರ್ಮಾಚರಣೆಯ ಭಾಗವಾದ ಹಿಜಾಬ್ ಆಚರಣೆಯನ್ನು ವಿರೋಧಿಸುತ್ತಿದ್ದಾರೆ. ಸಹೋದರರಂತೆ ಎಲ್ಲ ಸಮುದಾಯಗಳ ವಿದ್ಯಾರ್ಥಿಗಳು ಇದ್ದು ಈಗ ಅವರಲ್ಲಿ ಧರ್ಮದ ಹೆಸರಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡಲಾಗುತ್ತಿದೆ. ಇಂಥ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಿ ಮುಸ್ಲಿಮ ಮಹಿಳೆಯರ ಸಂವೈಧಾನಿಕ ಹಕ್ಕಿಗೆ ಚ್ಯುತಿ ಬರದಂತೆ ನೋಡಿಕೊಳ್ಳಬೇಕೆಂದು ಬೆಳಗಾವಿ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ನೀಡಿದ ಮನವಿ ಪತ್ರದಲ್ಲಿ ಕೋರಲಾಗಿದೆ.

ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾದ ತಬಸುಮ್ ಮುಲ್ಲಾ, ಹಾಜಿ ಮುಸಾ ಗೋರಿಖಾನ್, ಅಕಬರ ಸಡೆಕರ, ಕಾದೀರ ಶೇಖ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

You might also like
Leave a comment