This is the title of the web page

ಅಳ್ನಾವರದಲ್ಲಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಅಳ್ನಾವರ, 23- ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷಾನನ್ನು ಕೊಲೆ ಮಾಡಿದ ದುಷ್ಕರ್ಮಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಕುಂದಗೋಳದಲ್ಲಿ ಕುರಿಗಾಯಿ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದ ಪಾಪಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಇಲ್ಲಿನ ಹಿಂದೂ ಪರ ಸಂಘಟನೆಗಳು ಬುಧವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿದರು.

ಮಧ್ಯಾಹ್ನ ಇಲ್ಲಿನ ಬಸ್ ನಿಲ್ದಾಣದ ಬಳಿ ಇರುವ ಗಣೇಶ ಮಂದಿರದಿಂದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ಕಾರ್ಯಕರ್ತರು ಮೆರವಣಿಗೆ ಹೊರಟು ಘೋಷಣೆ ಕೂಗಿದರು. ಪಟ್ಟಣ ಪಂಚಾಯ್ತಿ ಎದುರು ಇರುವ ಸರ್ಕಲನಲ್ಲಿ ಹರ್ಷಾ ಕೊಲೆಗಾರರ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಬಜರಂಗ ದಳದ ಧಾರವಾಡ ಜಿಲ್ಲಾ ಸಂಚಾಲಕ ಶಿವಾನಂದ ಸತ್ತಿಗೇರಿ ಮಾತನಾಡಿ, ಹಿಂದೂ ಕಾರ್ಯಕರ್ತರ ಕೊಲೆಗೆ ಕುಮ್ಮಕ್ಕು ನೀಡಿದ ಸಂಘಟನೆಗಳನ್ನು ಬ್ಯಾನ್ ಮಾಡಬೇಕು. ಹರ್ಷ ಕುಟುಂಬಕ್ಕೆ ಧೈರ್ಯ ತುಂಬಿ ರೂ.50 ಲಕ್ಷ ಪರಿಹಾರ ನೀಡಬೇಕು. ಅವರ ಕುಟುಂಬ ವರ್ಗಕ್ಕೆ ಸರ್ಕಾರಿ ನೌಕರಿ ನೀಡಬೇಕು ಎಂದು ಒತ್ತಾಯಿಸಿದರು.

ಹಿಂದೂ ಕಾರ್ಯಕರ್ತನನ್ನು ಗುರಿಯಾಗಿಟ್ಟುಕೊಂಡು ಕೊಲೆ ಮಾಡಿದ ಪಾಪಿಗಳನ್ನು ಹಾಗೂ ಅವನ ಸಾವಿನ ಹಿಂದೆ ಯಾರಿದ್ದಾರೆ ಎಂದು ಪತ್ತೆ ಹಚ್ಚಿ ಅವರಿಗೆಲ್ಲ ಶಿಕ್ಷೆ ನೀಡಿ ಎಂದು ವಿನಂತಿಸಿ ಮುಖ್ಯ ಮಂತ್ರಿಗಳಿಗೆ ನೀಡಿದ ಮನವಿಯನ್ನು ತಹಶೀಲ್ದಾರ ಅಮರೇಶ ಪಮ್ಮಾರ ಸ್ವೀಕರಿಸಿದರು.

ಶ್ರೀಧರ ಸುಣಗಾರ, ಮಂಜುನಾಥ ನಂದಿಹಳ್ಳಿ, ರಾಜು ಕರ್ಲೆಕರ, ಗಿರೀಶ ನಾಂದೋಳಕರ, ಯಲ್ಲಪ್ಪ ಹುಬ್ಲೀಕರ, ನಾರಾಯಣ ಮೋರೆ, ಪ್ರವೀಣ ಪವಾರ, ಲಿಂಗರಾಜ ಮೂಲಿಮನಿ , ಸಂತೋಷ ಬಡಿಗೇರ ಇದ್ದರು.

You might also like
Leave a comment