ಬೆಳಗಾವಿ: ಹಿಂದೂ ಪದದ ಬಗ್ಗೆ ಶಾಸಕ ಸತೀಶ ಜಾರಕಿಹೊಳಿ ಹೇಳಿಕೆ ನಂತರ ಸತೀಶ ಜಾರಕಿಹೊಳಿ ವಿಷಾದ ವ್ಯಕ್ತಪಡಿಸಿದ್ದರು. ಇದನ್ನೇ ನೆಪವಾಗಿರಿಸಿ ಸತೀಶ ಜಾರಕಿಹೊಳಿ ಅವರ ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಇಂದು ಬೃಹತ್ ಪ್ರತಿಭಟನೆ ಮಾಡಲು ಮುಂದಾಗಿವೆ.
ಮಾನವ ಬಂಧುತ್ವ ವೇದಿಕೆ ಮತ್ತು ದಲಿತ, ಪ್ರಗತಿಪರ ಸಂಘಟನೆಗಳ ಒಕ್ಕೂಟ, ಪ್ರಗತಿಪರ ಸ್ವಾಮೀಜಿಗಳು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.
ಸತೀಶ ಜಾರಕಿಹೊಳಿ ಅವರು ನ. 6ರಂದು ನಿಪ್ಪಾಣಿಯಲ್ಲಿ ಹಿಂದೂ ಶಬ್ದದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಸಂಬಂಧ ಇಂದು ಸತೀಶ ಜಾರಕಿಹೊಳಿ ಅವರನ್ನು ಬೆಂಬಲಿಸಿ ನಿಪ್ಪಾಣಿಯಲ್ಲಿ ಪ್ರತಿಭಟನೆ ಮಾಡಲು ವಿವಿಧ ಸಂಘಟನೆಗಳು ಮುಂದಾಗಿವೆ.