This is the title of the web page

ಬಜರಂಗದಳ ಕಾರ್ಯಕರ್ತನ ಹತ್ಯೆ ಖಂಡಿಸಿ ಬೆಳಗಾವಿಯಲ್ಲಿ ಪ್ರತಿಭಟನೆ

ಬೆಳಗಾವಿ, 23- ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ ಬೆಳಗಾವಿಯಲ್ಲಿ ವಿಎಚ್‍ಪಿ ನೇತೃತ್ವದಲ್ಲಿ ಶ್ರೀರಾಮ ಸೇನೆ ಮತ್ತು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರಾಣಿ ಚನ್ನಮ್ಮಾ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಿತು. ಈ ವೇಳೆ ಹರ್ಷ ಫೋಟೋ ಹಿಡಿದು “ಅಮರ ರಹೆ, ಅಮರ ರಹೆ ಹರ್ಷ ಅಮರ ರಹೇ,” ಎಂದು ಘೋಷಣೆ ಕೂಗಿದರು. ಹರ್ಷ ನ ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆ ವಿಧಿಸಿ, ಹಾಗೂ ಎಸ್‍ಡಿಪಿಐ, ಪಿಎಫ್‍ಐ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾ ರ್ಯಾಲಿ ಹರ್ಷನ ಕೊಲೆ ಮಾಡಿದವರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ ಏರ್ಪಡಿಸಲಾಗಿತ್ತು.

You might also like
Leave a comment