Live Stream

November 2022
W T F S S M T
 1
2345678
9101112131415
16171819202122
23242526272829
30  

| Latest Version 8.2.9 |

State News

ಹಾದಿ ತಪ್ಪುತ್ತಿರುವ ಪಿಎಸ್‌ಐ ಅಕ್ರಮದ ತನಿಖೆ : ಸಿದ್ದರಾಮಯ್ಯ 

siddaramaiah

ದಾವಣಗೆರೆ : ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಸರಿಯಾದ ಮಾರ್ಗದಲ್ಲಿ ನಡೆಯುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಸರಿಯಾದ ಮಾರ್ಗದಲ್ಲಿ ನಡೆಯುತ್ತಿಲ್ಲ ಎಡಿಜಿಪಿಯಂತಹ ಅಧಿಕಾರಿಗಳನ್ನು ಸಿಐಡಿ ಅಧಿಕಾರಿಗಳು ಹೇಗೆ ಪ್ರಶ್ನಿಸುತ್ತಾರೆ. ಸಿಐಡಿಯಿಂದ ಸತ್ಯಾಸತ್ಯತೆ ಹೊರಬರುತ್ತದೆ ಎಂಬ ವಿಶ್ವಾಸ ನಮಗೆ ಇಲ್ಲ ಎಂದಿದ್ದಾರೆ.

ಇನ್ನು ಮಹಿಳೆಗೆ ಕಪಾಳಮೋಕ್ಷ ಮಾಡಿರುವ ವಸತಿ ಸಚಿವ ವಿ. ಸೋಮಣ್ಣ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಅವರು ಸಚಿವರಾಗಲು ನಾಲಾಯಕ್. ಜನರ ಸಂಕಷ್ಟ, ಸಮಸ್ಯೆಗಳಿಗೆ ಸ್ಪಂದಿಸುವ ತಾಳ್ಮೆ, ಸಹನೆ ಇರದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.


A B Dharwadkar
the authorA B Dharwadkar

Leave a Reply