Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

Crime News

ಪಿಎಸ್‌ಐ ಪರೀಕ್ಷೆ ಅಕ್ರಮ : ಒಂದೇ ದಿನ 25 ಮಂದಿ ಬಂಧನ

crime

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯ ಅಕ್ರಮ ಸಂಬಂಧ ಸಿಐಡಿ ಅಧಿಕಾರಿಗಳು ಇಂದು ಭಾರಿ ಕಾರ್ಯಾಚರಣೆ ನಡೆಸಿ ವಿವಿಧ ಜಿಲ್ಲೆಗಳಲ್ಲಿ 25 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಸಿಐಡಿ ಅಧಿಕಾರಿಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿಯನ್ನು ನಡೆಸಲಾಗಿದೆ. ಸಿಐಡಿ ಎಸ್ಪಿ ರಮೇಶ ಬಾನೋತ್ ನೇತೃತ್ವದಲ್ಲಿ ಸಿಐಡಿ ಪೊಲೀಸರು ದಾಳಿ ನಡೆಸಿದ್ದಾರೆ.

ಇಂದು ಬೆಳಿಗ್ಗೆ 4 ಗಂಟೆಯಿಂದ 30 ತಂಡಗಳ 100ಕ್ಕೂ ಹೆಚ್ಚು ಸಿಐಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಇಂದಿನ ಕಾರ್ಯಾಚರಣೆಯಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆಯ ಅಕ್ರಮ ಸಂಬಂಧ 25 ಜನರನ್ನು ಸಿಐಡಿ ವಿಭಾಗ ಪೊಲೀಸರು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ.


A B Dharwadkar
the authorA B Dharwadkar

Leave a Reply