This is the title of the web page

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಶೇ. 61.88 ರಷ್ಟು ಉತ್ತೀರ್ಣ

 

 

ಬೆಂಗಳೂರು : ದ್ವಿತೀಯ ಪಿಯುಸಿ ಕೊನೆಯ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು ಶೇಕಡ.61.88 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಹೆಚ್ಚು ತೇರ್ಗಡೆಯಾಗಿದ್ದಾರೆ.

4,02,697 ವಿದ್ಯಾರ್ಥಿಗಳು ಈ ಬಾರಿ ಪಾಸ್ ಆಗಿದ್ದಾರೆ. 5,99,794 ವಿದ್ಯಾರ್ಥಿಗಳು ಈ ಬಾರಿ 2nd ಪಿಯುಸಿ ಪರೀಕ್ಷೆ ಬರೆದಿದ್ದರು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ ಸುದ್ಧಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಲಾ ವಿಭಾಗದಲ್ಲಿ 2,28,167 ಮಂದಿ, ವಾಣಿಜ್ಯ ವಿಭಾಗದಲ್ಲಿ 2,45,519 ಮಂದಿ ಮತ್ತು ವಿಜ್ಞಾನ ವಿಭಾಗದಲ್ಲಿ 2,10,569 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಶೇ.72.53 ವಿಜ್ಞಾನ ವಿದ್ಯಾರ್ಥಿಗಳು, ಶೇ.64.97 ವಾಣಿಜ್ಯ, ಶೇ.48.71 ಕಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಗ್ರಾಮಾಂತರ ಭಾಗದಲ್ಲಿ ಶೇಕಡಾ 62.18 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದರೆ, ನಗರ ಪ್ರದೇಶದಲ್ಲಿ ಶೇಕಡಾ 61.78 ವಿದ್ಯಾರ್ಥಿಗಳು ಪಾಸಾಗಿದ್ದಾರೆ.ಪೂರಕ ಪರೀಕ್ಷೆ ದಿನಾಂಕ ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುತ್ತದೆ. ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ,ವಿಜಯಪುರ 3ನೇ ಸ್ಥಾನ, ಬೆಂಗಳೂರು ದಕ್ಷಿಣ ನಾಲ್ಕನೇ ಸ್ಥಾನ, ಉತ್ತರ ಕನ್ನಡ 5ನೇ ಸ್ಥಾನ ಹಾಗೂ ಚಿತ್ರದುರ್ಗ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

ಮಧ್ಯಾಹ್ನ 12 ಗಂಟೆಯ ನಂತರ www.karresults.nic.in ವೆಬಸೈಟಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಶಿಕ್ಷಣ ಸಚಿವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

You might also like
Leave a comment