This is the title of the web page

ರಾಜ್ಯದಾದ್ಯಂತ ಪಿಯುಸಿ ಪರೀಕ್ಷೆ ಆರಂಭ

ಬೆಂಗಳೂರು, ೨೨- ಇಂದಿನಿಂದ ರಾಜ್ಯದಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭ ಆಗಿದ್ದು, ಮೇ 18 ರ ವರೆಗೆ ನಡೆಯಲಿದೆ. ಪರೀಕ್ಷೆ ಸುಗಮವಾಗಿ ನಡೆಯಲು ಎಲ್ಲ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ಸಲುವಾಗಿ ಸಹಾಯವಾಣಿಯನ್ನೂ ಸಹ ಆರಂಭಿಸಲಾಗಿದೆ.

ಬೆಳಿಗ್ಗೆ 10:15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದ್ದು, 6 ಲಕ್ಷ 84 ಸಾವಿರ 255 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯುತ್ತಿದ್ದಾರೆ. ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು ಪರೀಕ್ಷಾ ಕೇಂದ್ರದ ಬಳಿಯ ಜೆರಾಕ್ಸ್ ಅಂಗಡಿ ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ.

ಪ್ರವೇಶ ಪತ್ರ ತೋರಿಸಿ ಸರ್ಕಾರಿ ಬಸ್ ನಲ್ಲಿ ಉಚಿತವಾಗಿ ವಿದ್ಯಾರ್ಥಿಗಳು ತೆರಳಲು ಅವಕಾಶ ಸಹ ಕಲ್ಪಿಸಲಾಗಿದೆ.

ಪರೀಕ್ಷೆಗಳು ರಾಜ್ಯದ 1,076 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದು, ಹೈಕೋರ್ಟ ಆದೇಶದನ್ವಯ ಹಿಜಾಬ್ ಸೇರಿದಂತೆ ಇತರೆ ಧಾರ್ಮಿಕ ಸಂಕೇತಗಳನ್ನು ಬಿಂಬಿಸುವ ವಸ್ತ್ರಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗುವಂತಿಲ್ಲ. ಪರೀಕ್ಷಾ ಕಾರ್ಯಕ್ಕೆ ಹಾಜರಾಗುವ ಸಿಬ್ಬಂದಿಗೂ ಕೂಡ ಇದೇ ನಿಯಮ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.

You might also like
Leave a comment