Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಪುನೀತ ರಾಜಕುಮಾರ ಪ್ರಥಮ ವರ್ಷದ ಪುಣ್ಯ ಸ್ಮರಣೆ 


ಬೆಂಗಳೂರು: ಕರ್ನಾಟಕ ರತ್ನ ಡಾ. ಪುನೀತ​ ರಾಜಕುಮಾರ​ ಅವರು ನಿಧನರಾಗಿ ಇಂದಿಗೆ ಒಂದು ವರ್ಷ ಕಳೆದಿದೆ. ತಮ್ಮ ಸರಳತೆ ಮತ್ತು ಮಾನವೀಯ ಗುಣಗಳಿಂದಲೇ ಕೋಟ್ಯಾಂತರ ಅಭಿಮಾನಿಗಳ ಮನದಲ್ಲಿ ಅಪ್ಪು ಮನೆ ಮಾಡಿದ್ದಾರೆ.

ಜೊತೆಗಿರದ ಜೀವ ಎಂದಿಗೂ ಜೀವಂತ ಎನ್ನುವಂತೆ ಪ್ರತಿ ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಅಭಿಮಾನಿಗಳು ನೆನೆಯುತ್ತಿದ್ದಾರೆ.

ಇಂದು ಕಂಠೀರವ ಸ್ಟುಡಿಯೋ ಬಳಿಯಲ್ಲಿ ಬಿಗಿ ಬಂದೋಬಸ್ತ್​ ಮಾಡಲಾಗಿದೆ. ಉತ್ತರ ವಿಭಾಗದ ಡಿಸಿಪಿ ವಿನಾಯಕ ಪಾಟೀಲ​ರ ನೇತೃತ್ವದಲ್ಲಿ ಬಂದೋಬಸ್ತ್​ ನೀಡಲಾಗಿದ್ದು. ನಿನ್ನೆ ರಾತ್ರಿಯಿಂದಲು ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಕಂಠೀರವ ಸ್ಟುಡಿಯೋ ಮುಂಭಾಗದಿಂದಲು ಸಹ ಪೊಲೀಸರು ಸರ್ಪಗಾವಲಿನಲ್ಲಿದ್ದು, ಬ್ಯಾರಿಕೇಡ್​ಗಳನ್ನು ಅಳವಡಿಸಿರುವ ಮುಖಾಂತರವಾಗಿ ಜನರು ಬರುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಇಂದು ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಲಿದ್ದು, ಯಾವುದೇ ರೀತಿಯಾದ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮವನ್ನು ಪೊಲೀಸರು ವಹಿಸಿದ್ದಾರೆ.

ಪುನೀತರನ್ನು ನೋಡಲು ಬರುವ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ. ನಿನ್ನೆ ರಾತ್ರಿಯಿಂದಲು ಹಲವು ಕಾರ್ಯಕ್ರಮಗಳು ನಡೆಯುತ್ತಿವೆ.


A B Dharwadkar
the authorA B Dharwadkar

Leave a Reply