Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

international News

ಕತಾರ್ ನಲ್ಲಿ ಕೋಟಿ ಕಂಠ ಗಾಯನ


ಕತಾರ್ : ಕತಾರ್ ನಲ್ಲಿ ನೆಲೆಸಿರುವ ಆದಿವಾಸಿ ಕನ್ನಡಿಗರು ಹಾಗೂ ಕರ್ನಾಟಕ ಸಂಘವು ೬೭ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಆಯೋಜಿಸಿದ ಕೋಟಿ ಕಂಠ ಗಾಯನದ ಕಾರ್ಯಕ್ರಮದಲ್ಲಿ ಭಾಗವಹಿಸಿತು.

ಕರ್ನಾಟಕ ಸಂಘ, ಕತಾರ್ ನ ಆಡಳಿತ ಮಂಡಳಿ ಸದಸ್ಯರು ಹಾಗೂ ಕರ್ನಾಟಕ ಸಂಘದ ಸದಸ್ಯರು ಜಯ ಭಾರತ ಜನನಿಯ ತನುಜಾತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿದ್ಯಾಕೇತನ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡುಗಳನ್ನು ಹಾಡಿದರು.

ಈ ಸಂದರ್ಭದಲ್ಲಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷರು ಹಾಗೂ ಕರ್ನಾಟಕ ಸಂಘದ ಮಾಜಿ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಹಾಗು ಕರ್ನಾಟಕ ಸಂಘ ಅಧ್ಯಕ್ಷ ಮಹೇಶ ಗೌಡ ಅವರು ಭಾಗವಹಿಸಿದರು.

ಈ ವೇಳೆ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲ ಗಾಯಕರು ಹಾಗೂ ಸಂಘದ ಸದಸ್ಯರಿಗೆ ಮಹೇಶ ಗೌಡ ಅವರು ಧನ್ಯವಾದಗಳನ್ನು ತಿಳಿಸಿದರು.


A B Dharwadkar
the authorA B Dharwadkar

Leave a Reply