ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ರಾಧಾಕೃಷ್ಣನ್

A B Dharwadkar
ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ರಾಧಾಕೃಷ್ಣನ್

ನವದೆಹಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ರಾಧಾಕೃಷ್ಣನ್‌ಗೆ ಪ್ರಮಾಣವಚನ ಬೋಧಿಸಿದರು.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ,
ಮಾಜಿ ಉಪರಾಷ್ಟ್ರಪತಿಗಳಾದ ಜಗದೀಪ್ ಧನಕ‌ರ್, ವೆಂಕಯ್ಯ ನಾಯ್ಡು, ಹಮೀದ್ ಅನ್ಸಾರಿ, ಲೋಕಸಭಾ ಸ್ಪೀಕ‌ರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಧನಕ‌ರ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿದ್ದ ಹುದ್ದೆಗೆ ಮಂಗಳವಾರ (ಸೆ.9) ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಾಧಾಕೃಷ್ಣನ್, ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಬಿ.ಸುದರ್ಶನ ರೆಡ್ಡಿ ಅವರನ್ನು ಸೋಲಿಸಿದ್ದರು.

ರಾಧಾಕೃಷ್ಣನ್ ಪರ ಒಟ್ಟು 452 ಮತಗಳು ಚಲಾವಣೆಯಾಗಿದ್ದವು. ರೆಡ್ಡಿ 300 ಮತಗಳನ್ನು ಗಳಿಸಿದ್ದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ (ಆರ್‌ಎಸ್‌ಎಸ್) ಆಳವಾದ ಬೇರುಗಳನ್ನು ಹೊಂದಿರುವ ತಮಿಳುನಾಡಿನ ಹಿರಿಯ ಬಿಜೆಪಿ ನಾಯಕ 67 ವರ್ಷದ ರಾಧಾಕೃಷ್ಣನ್ ತಮಿಳುನಾಡಿನ ವಾಜಪೇಯಿ ಎಂದೇ ಖ್ಯಾತಿ ಗಳಿಸಿದ್ದಾರೆ.

ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಪಂಜಾಬ್ ರಾಜ್ಯಪಾಲ ಮತ್ತು ಚಂಡೀಗಢ ಆಡಳಿತಾಧಿಕಾರಿ ಗುಲಾಬ್ ಚಂದ್ ಕಟಾರಿಯಾ, ಜಾರ್ಖಂಡ್‌ ರಾಜ್ಯಪಾಲ ಸಂತೋಷ್ ಗಂಗ್ವಾರ್ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.