ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಕ್ಷದ ಅಧ್ಯಕ್ಷೀಯ ಸ್ಪರ್ಧೆಯಿಂದ ಹೊರಗುಳಿದಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷರಾಗುವ ಯಾರೇ ಆಗಲಿ ಅವರು ಭಾರತದ ನಂಬಿಕೆ ವ್ಯವಸ್ಥೆ ಮತ್ತು ದೃಷ್ಟಿಕೋನವನ್ನು ಪ್ರತಿನಿಧಿಸುತ್ತಾರೆ ಎಂಬುದನ್ನು ನೆನಪಿನಲ್ಲಿಡಬೇಕು. ಕಾಂಗ್ರೆಸ್ ಅಧ್ಯಕ್ಷರು ಕೇವಲ ಸಾಂಸ್ಥಿಕ ಹುದ್ದೆಯಲ್ಲ, ಇದು ಸೈದ್ಧಾಂತಿಕ ಹುದ್ದೆ ಮತ್ತು ನಂಬಿಕೆಯ ವ್ಯವಸ್ಥೆಯಾಗಿದೆ ಎಂದು ಹೇಳಿದ್ದಾರೆ.
ಈ ಮೂಲಕ ಗಾಂಧಿಯೇತರ ಕಾಂಗ್ರೆಸ್ ಅಧ್ಯಕ್ಷರಿಗೆ 25 ವರ್ಷಗಳ ನಂತರ ಸ್ಥಾನ ತೆರವುಗೊಳಿಸಿದರು.