This is the title of the web page

ಕೃಷಿ ಕಾನೂನಿನಂತೆ ಅಗ್ನಿಪಥ ಯೋಜನೆಯನ್ನು ಪ್ರಧಾನಿ ಹಿಂಪಡೆಯಲಿ : ರಾಹುಲ್ ಗಾಂಧಿ 

 

 

ನವದೆಹಲಿ : ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಂಡತೆ ಪ್ರಧಾನಿ ಮೋದಿಯವರಿಗೆ ಅಗ್ನಿಪಥ ಯೋಜನೆಯನ್ನು ಹಿಂಪಡೆಯಲು ಒತ್ತಾಯಿಸಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ ಅವರು ​, ಕಳೆದ ವರ್ಷ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಂಡಾಗ ರೈತರ ಕ್ಷಮೆಯಾಚಿಸಿದ್ದು, ಇದೀಗ ಎರಡನೇ ಬಾರಿಗೆ ಪ್ರಧಾನಿ ರಾಷ್ಟ್ರದ ಯುವಜನರಲ್ಲಿ ಕ್ಷಮೆಯಾಚಿಸಬೇಕು ಎಂದು ಹೇಳಿದರು.

ಬಿಜೆಪಿ ಸರ್ಕಾರ ಜೈ ಜವಾನ್, ಜೈ ಕಿಸಾನ್ ಮೌಲ್ಯಗಳಿಗೆ ಅಪಮಾನ ಮಾಡಿದೆ. ಕಪ್ಪು ಕೃಷಿ ಕಾಯ್ದೆಯನ್ನು ಪ್ರಧಾನಿ ಹಿಂಪಡೆಯಬೇಕು ಎಂದು ಈ ಹಿಂದೆಯೂ ಹೇಳಿದ್ದೆ. ಅದೇ ರೀತಿ ಅಗ್ನಿಪಥ ಅನ್ನು ಹಿಂದಕ್ಕೆ ತೆಗೆದುಕೊಳ್ಳಬೇಕಾಗುತ್ತದೆ ಎಂದು ಅವರು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

 

You might also like
Leave a comment