ಬೆಂಗಳೂರು, ೧೩- ಮೌಂಡೂಸ್ ಚಂಡಮಾರುತದ ಕಾರಣಕ್ಕೆ ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಚಂಡಮಾರುತ ಈಗ ತನ್ನ ವೇಗವನ್ನು ಕಳೆದುಕೊಂಡಿದ್ದರೂ ಸಹ ಡಿಸೆಂಬರ 16ರವರೆಗೆ ರಾಜ್ಯದಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ 12 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ.
ಶಿವಮೊಗ್ಗ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮಳೆಯಿಂದಾಗಬಹುದಾದ ಅನಾಹುತಗಳ ಕುರಿತು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಇದರ ಜೊತೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಹಾಗೂ ಇತರೆ ಜಿಲ್ಲೆಗಳಾದ ಬಾಗಲಕೋಟ, ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಹಾವೇರಿ, ಗದಗ, ಬಳ್ಳಾರಿ ಜಿಲ್ಲೆಗಳಲ್ಲಿಯೂ ಎಲ್ಲೋ ಅಲರ್ಟ ಘೋಷಿಸಲಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳ ವ್ಯಾಪ್ತಿಯಲ್ಲೂ ಸಹ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆ ಇದೆ.