Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

National News

ರಾಜೀವ ಗಾಂಧಿ ಫೌಂಡೇಶನ್ ಲೈಸೆನ್ಸ ರದ್ದು 


ಹೊಸದಿಲ್ಲಿ : ವಿದೇಶಿ ಕೊಡುಗೆಗಳಲ್ಲಿನ ಅಕ್ರಮಗಳ ಆರೋಪದ ಮೇಲೆ ಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಸರ್ಕಾರೇತರ ಸಂಸ್ಥೆಗಳಾದ ರಾಜೀವ ಗಾಂಧಿ ಫೌಂಡೇಶನ್ ಮತ್ತು ರಾಜೀವ ಗಾಂಧಿ ಚಾರಿಟಬಲ್ ಟ್ರಸ್ಟನ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ ಪರವಾನಗಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ.

ಆರ್ಜಿಎಫ್ ಮತ್ತು ಆರ್ಜಿಸಿಟಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆ ಸಿಬಿಐಗೆ ವಹಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸೋನಿಯಾ ಗಾಂಧಿ ರಾಜೀವ ಗಾಂಧಿ ಫೌಂಡೇಶನ್ ಮುಖ್ಯಸ್ಥರಾಗಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ ಸಿಂಗ್, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಸದಸ್ಯರಾಗಿದ್ದಾರೆ. ಸೋನಿಯಾ ಗಾಂಧಿ ಅವರು ರಾಜೀವ ಗಾಂಧಿ ಚಾರಿಟಬಲ್ ಟ್ರಸ್ಟ್ ಮುಖ್ಯಸ್ಥರಾಗಿದ್ದಾರೆ. ರಾಹುಲ್ ಗಾಂಧಿ ಮತ್ತು ಮಾಜಿ ರಾಜ್ಯಸಭಾ ಸಂಸದ ಡಾ ಅಶೋಕ ಎಸ್. ಗಂಗೂಲಿ ಇತರರು ಸದಸ್ಯರಾಗಿದ್ದಾರೆ.

ಗಾಂಧಿ ಕುಟುಂಬ ನಡೆಸುತ್ತಿರುವ ಎನ್ ಜಿ ಓಗಳಲ್ಲಿ ಆಪಾದಿತ ಅಕ್ರಮಗಳ ಕುರಿತು ತನಿಖೆ ನಡೆಸಲು ಗೃಹ ಸಚಿವಾಲಯವು 2020 ರಲ್ಲಿ ರಚಿಸಿದ ಅಂತರ-ಸಚಿವಾಲಯ ಸಮಿತಿಯು ನಡೆಸಿದ ತನಿಖೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

1991ರಲ್ಲಿ ರಾಜೀವ ಗಾಂಧಿ ಫೌಂಡೇಶನ್ ಅನ್ನು ಸ್ಥಾಪಿಸಲಾಯಿತು. ರಾಜೀವ ಗಾಂಧಿ ಫೌಂಡೇಶನ್ 1991ರಿಂದ 2009 ರವರೆಗೆ ಆರೋಗ್ಯ, ವಿಜ್ಞಾನ ಮತ್ತು ತಂತ್ರಜ್ಞಾನ, ಮಹಿಳೆಯರು ಮತ್ತು ಮಕ್ಕಳು, ಅಂಗವೈಕಲ್ಯ ಬೆಂಬಲ, ಇತ್ಯಾದಿ ಸೇರಿದಂತೆ ಹಲವಾರು ನಿರ್ಣಾಯಕ ವಿಷಯಗಳ ಮೇಲೆ ಕೆಲಸ ಮಾಡಿದೆ. ಅದರ ವೆಬಸೈಟ್ ಹೇಳುವಂತೆ ಇದು ಶಿಕ್ಷಣ ಕ್ಷೇತ್ರದಲ್ಲೂ ಕೆಲಸ ಮಾಡಿದೆ.


A B Dharwadkar
the authorA B Dharwadkar

Leave a Reply