ಬಳ್ಳಾರಿ: ವಿದ್ಯುತ್ ತಂತಿ ಸ್ಪರ್ಶಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದಂಪತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಂಡಿಹಟ್ಟಿಯಲ್ಲಿ ನಡೆದಿದೆ.
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪಂಪಾಪತಿ ಹಾಗೂ ಅವರ ಪತ್ನಿ ದ್ಯಾವಮ್ಮ ಮೃತ ದುರ್ದೈವಿಗಳಾಗಿದ್ದಾರೆ.
ಮನೆಯ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ದ್ಯಾವಮ್ಮಗೆ ತಗುಲಿತ್ತು, ಈ ವೇಳೆ ಪತ್ನಿಯನ್ನು ಬಿಡಿಸಲು ಹೋದ ಪತಿ ಕೂಡ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.