Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

Crime News

ಮನೆ ಪಾಠ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಶಿಕ್ಷಕಿ ಮೇಲೆ ಸಾಮೂಹಿಕ ಬಲಾತ್ಕಾರ


ಲಖನೌ, ೧೮- ಶಿಕ್ಷಕಿಯೊಬ್ಬರು ತಮ್ಮ ವಿದ್ಯಾರ್ಥಿಗಳಿಗೆ ಮನೆ ಪಾಠ ನೀಡಿ ವಾಪಸ್ ಆಟೋದಲ್ಲಿ ತಮ್ಮ ಮನೆಗೆ ಮರಳುತ್ತಿದ್ದ ವೇಳೆ ಅವರ ಮೇಲೆ ಅಟೋ ಚಾಲಕ ಸೇರಿದಂತೆ ಮತ್ತೊಬ್ಬ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶ ರಾಜಧಾನಿ ಲಖನೌದಲ್ಲಿ ನಡೆದಿದೆ.

ಶನಿವಾರ ಈ ಘಟನೆ ನಡೆದಿದ್ದು, ಶಿಕ್ಷಕಿ ಆಟೋ ಏರಿದ ವೇಳೆ ಚಾಲಕನ ಜೊತೆ ಆಕಾಶ ತಿವಾರಿ ಎಂಬಾತನೂ ಸಹ ಇದ್ದನೆನ್ನಲಾಗಿದೆ. ಇಬ್ಬರೂ ಸೇರಿ ಶಿಕ್ಷಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ.

ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಶಿಕ್ಷಕಿಯನ್ನು ರಸ್ತೆಯಲ್ಲೇ ಬಿಟ್ಟು ಹೋಗಿದ್ದು, ಅಂದು ರಾತ್ರಿಯೇ ಆರೋಪಿಗಳ ವಿರುದ್ಧ ದೂರು ದಾಖಲಿಸಲು ಶಿಕ್ಷಕಿ ಮೂರ್ನಾಲ್ಕು ಠಾಣೆಗಳಿಗೆ ಎಡತಾಕಿದರೂ ಸೂಕ್ತ ಪ್ರತಿಕ್ರಿಯೆ ಸಿಗಲಿಲ್ಲ. ನಂತರ ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಯ ಮಾಹಿತಿ ವೈರಲ್ ಆದ ಬಳಿಕ ಎಚ್ಚೆತ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಇದೀಗ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಪೊಲೀಸ್ ಔಟ್ ಸ್ಟೇಷನ್ ಉಸ್ತುವಾರಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದ್ದು, ಉಳಿದ ಮೂರು ಪೊಲೀಸ್ ಠಾಣೆಗಳ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಅಲ್ಲದೇ ಆರೋಪಿ ಆಕಾಶ ತಿವಾರಿ ಎಂಬಾತನನ್ನು ಬಂಧಿಸಲಾಗಿದ್ದು, ಆಟೋ ಚಾಲಕ ನಾಪತ್ತೆಯಾಗಿದ್ದಾನೆ.


Leave a Reply