This is the title of the web page

ಟ್ಯೂಷನ್ ನೆಪದಲ್ಲಿ ಒಂದೂವರೆ ವರ್ಷ ಲೈಂಗಿಕ ದೌರ್ಜನ್ಯ; ಗರ್ಭವತಿಯಾದ ಯುವತಿ

ಹಾವೇರಿ, ೭- ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಸಹಾಯಕ ಪ್ರಾಧ್ಯಾಪಕರೊಬ್ಬರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪ‌ ಮಾಡಲಾಗಿದೆ.

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಘಟನೆ ನಡೆದಿದೆ.

ಬಂಕಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ನಿಂಗಪ್ಪ ಕಲಕೋಟಿ ಎಂಬುವವರು ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮನೆಯಲ್ಲಿ ಪಾಠ ಹೇಳಿಕೊಡುವುದಾಗಿ ಮನೆಗೆ ಕರೆಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಒಂದೂವರೆ ವರ್ಷಗಳಿಂದ ನಿಂಗಪ್ಪ ಕಲಕೋಟಿ ಎಂಬವ ವಿದ್ಯಾರ್ಥಿನಿ ಮೇಲೆ ಏಳೆಂಟು ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಲೈಂಗಿನ ದೌರ್ಜನ್ಯ ಎಸಗಿದ್ದಲ್ಲದೇ ನಿಂಗಪ್ಪ ಕಲಕೋಟಿ ವಿದ್ಯಾರ್ಥಿನಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ.

ನಿಂಗಪ್ಪ ಎಸಗಿದ ಕೃತ್ಯದಿಂದ ಕಾಲೇಜು ವಿದ್ಯಾರ್ಥಿನಿ ಇದೀಗ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ.
ಸದ್ಯ ಸಂತ್ರಸ್ತ ವಿದ್ಯಾರ್ಥಿನಿಯನ್ನು ಹಾವೇರಿ ನಗರದ ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲಿಸಲಾಗಿದೆ.

ಸಹಾಯಕ ಪ್ರಾಧ್ಯಾಪಕ ನಿಂಗಪ್ಪ ಕಲಕೋಟಿ ವಿರುದ್ಧ ವಿದ್ಯಾರ್ಥಿನಿ ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

You might also like
Leave a comment