This is the title of the web page

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; ಬಜರಂಗದಳ ಕಾರ್ಯಕರ್ತನ ಕೊಲೆ ಸಂಬಂಧ ಓರ್ವನ ಬಂಧನ

ಶಿವಮೊಗ್ಗ, 21- ಬಜರಂಗದಳ ಕಾರ್ಯಕರ್ತ 23 ವರ್ಷದ ಯುವಕ ಹರ್ಷನ ಕೊಲೆ ಪ್ರಕರಣದಲ್ಲಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಒಬ್ಬ ಆರೋಪಿಯನ್ನು ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿದ್ದಾರೆ.

ಕೊಲೆ ಪ್ರಕರಣದಲ್ಲಿ ಯಾರೆಲ್ಲಾ ಇದ್ದಾರೆ, ಯಾವ ಕಾರಣಕ್ಕಾಗಿ ಈ ಕೊಲೆ ನಡೆದಿದೆ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಆರೋಪಿಗಳು ನಿನ್ನೆ ರಾತ್ರಿ ಕಾರಿನಲ್ಲಿ ಬಂದು ಕೊಲೆ ಮಾಡಿ ಆಟೋದಲ್ಲಿ ಪರಾರಿಯಾಗಿದ್ದರು.

ಈ ಮಧ್ಯೆ ಬಜರಂಗದಳ ಕಾರ್ಯಕರ್ತನ ಹತ್ಯೆ ಸಂಬಂಧ ಸೀಗೆಹಟ್ಟಿ‌ ಭಾಗದಲ್ಲಿ ಕಲ್ಲು ತೂರಾಟ ನಡೆಯಿತು. ಸ್ಥಳಕ್ಕೆ ಪೂರ್ವ ವಲಯ ಡಿಐಜಿ ತ್ಯಾಗರಾಜನ್ ಹಾಗೂ ಎಸ್​ಪಿ ಲಕ್ಷ್ಮಿಪ್ರಸಾದ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರೆ. ಯಾವುದೇ ಆಹಿತಕರ ಘಟನೆ ನಡೆಯದಂತೆ ಬೇರೆ ಜಿಲ್ಲೆಗಳಿಂದಲೂ ಹೆಚ್ಚಿ‌ನ ಪೊಲೀಸ್ ಸಿಬ್ಬಂದಿ ಕರೆಯಿಸಿಕೊಳ್ಳಲಾಗುತ್ತಿದೆ.

You might also like
Leave a comment