ಮೈಸೂರು, ೧: 2024ರ ಎಪ್ರಿಲ್ ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ವೈರಲ್ ಆಗಿದ್ದವು. ಹಲವಾರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯವನ್ನು ಚಿತ್ರಿಸುವ 2,900 ಕ್ಕೂ ಹೆಚ್ಚು ವಿಡಿಯೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.
ಕೋರ್ಟ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಮಾನಿಸಿ ತೀರ್ಪು ನೀಡಿರುವುದರಿಂದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ರಾಜಕೀಯ ಭವಿಷ್ಯವೇ ಅಂತ್ಯವಾದಂತಾಗಿದೆ. ಪ್ರಜ್ವಲ್ಗೆ ಕನಿಷ್ಠ 10 ವರ್ಷಗಳಿಂದ ಗರಿಷ್ಠ ಜೀವಾವಧಿ ಶಿಕ್ಷೆ ಪ್ರಕಟಿಸುವ ಸಾಧ್ಯತೆ ಕೂಡ ಇದೆ. ಹೀಗಾಗಿ ಅವರು ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸುವ ಅರ್ಹತೆ ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜಲ್ವ್ ರೇವಣ್ಣ ಅವರು ಕಳೆದ ಕಳೆದ 14 ತಿಂಗಳಿನಿಂದ ಸೆರೆಮನೆಯಲ್ಲಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಹಲವು ಸೆಕ್ಷನ್ಗಳ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಐಪಿಸಿ ಸೆಕ್ಷನ್ 376 (2)(ಕೆ) ಅಡಿ ಮಹಿಳೆಯ ಮೇಲೆ ಹಕ್ಕು ಚಲಾಯಿಸುವ ಸ್ಥಿತಿಯಲ್ಲಿದ್ದು ಅತ್ಯಾಚಾರ ಎಸಗಲಾಗಿದೆ. 376 (2) (ಎನ್) ಅಡಿ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ. 354(ಎ) ಲೈಂಗಿಕತೆ ಬೇಡಿಕೆ ಇಡುವುದು. 354 (ಬಿ) ಮಹಿಳೆಯನ್ನು ವಿವಸ್ತ್ರಗೊಳಿಸುವುದು. 354 (ಸಿ) ಮಹಿಳೆಯ ಅಶ್ಲೀಲ ದೃಶ್ಯ ಚಿತ್ರೀಕರಿಸುವುದು. 506 ಜೀವ ಬೆದರಿಕೆ, 201 ಸಾಕ್ಷ್ಯನಾಶದ ಅಡಿ ದೋಷಾರೋಪ ಹೊರಿಸಲಾಗಿದೆ.

