ಬೆಳಗಾವಿ, ಜ.10 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಜನವರಿ 12 ಹಾಗು 13 ರಂದು ಸಂಗೊಳ್ಳಿ ಹಾಗೂ ನಂದಗಡದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ ನಡೆಯಲಿದೆ.
ಸಂಗೊಳ್ಳಿಯ ಸರ್ಕಾರಿ ಮೈದಾನದಲ್ಲಿ ಜ.12 ರಂದು ಸಂಜೆ 7 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ -2023ರ ಉದ್ಘಾಟನಾ ಸಮಾರಂಭ ನಡೆಯಲಿದೆ. ಹಿರೇಮಠ ಶ್ರೀ ಗುರು ಸಿದ್ದಲಿಂಗೇಶ್ವರ ಸಂಸ್ಥಾನದ ಶ್ರೀ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಕಿತ್ತೂರು ಸಂಸ್ಥಾನ ಕಲ್ಮಠದ ರಾಜ ಗುರುಗಳಾದ ಶ್ರೀ ಮಡಿವಾಳ ರಾಜ ಯೋಗೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಜಲ ಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಜರಾಯಿ, ಹಜ್ ಮತ್ತು ವಕ್ಫ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ ಕುಮಾರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಮಹೇಶ ಕುಮಠಳ್ಳಿ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ದುರ್ಯೋಧನ ಐಹೊಳೆ ಹಾಗೂ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ ವಿಶೇಷ ಆಮಂತ್ರಿತರಾಗಿ ಆಗಮಿಸಲಿದ್ದಾರೆ.
ಲೋಕಸಭಾ ಸದಸ್ಯ ಅನಂತ ಕುಮಾರ ಹೆಗಡೆ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದೆ ಮಂಗಳಾ ಅಂಗಡಿ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಚಿಕ್ಕೋಡಿ-ಸದಲಗಾ ಕ್ಷೇತ್ರದ ಶಾಸಕ ಗಣೇಶ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ, ಕಾಗವಾಡ ಶಾಸಕ ಶ್ರೀಮಂತ ಪಾಟೀಲ, ಬೆಳಗಾವಿ ಉತ್ತರ ಶಾಸಕ ಅನೀಲ ಬೆನಕೆ, ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ, ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ, ಖಾನಾಪುರ ಶಾಸಕಿ ಅಂಜಲಿ ನಿಂಬಾಳಕರ, ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ, ರಾಮದುರ್ಗ ಶಾಸಕ ಮಾದೇವಪ್ಪ ಯಾದವಾಡ, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ, ಚನ್ನರಾಜ ಹಟ್ಟಿಹೊಳಿ, ಲಖನ್ ಜಾರಕಿಹೊಳಿ, ಎಂ. ನಾಗರಾಜ, ಪ್ರಕಾಶ ಹುಕ್ಕೇರಿ, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಮಾರುತಿ ಅಷ್ಟಗಿ, ಕರ್ನಾಟಕ ರಾಜ್ಯ ಮದ್ಯಪಾನ ಸ್ವಯಂ ಮಂಡಳಿ ಅಧ್ಯಕ್ಷರಾದ ಮಲ್ಲಿಕಾರ್ಜುನ ತುಬಾಕಿ, ಕಾಡ ಮಲಪ್ರಭಾ ಮತ್ತು ಘಟಪ್ರಭಾ ಯೋಜನೆಗಳ ಅಧ್ಯಕ್ಷ ವಿಶ್ವನಾಥ ಪಾಟೀಲ, ಸಂಗೊಳ್ಳಿ ಗ್ರಾಮ ಪಂಚಾಯತಿ ಅಧ್ಯಕರಾದ ಇಮಾಮಹುಸೇನ ಖುದ್ದುನವರ ಉಪಸ್ಥಿತರಿರಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಗ್ರಾಮೀಣ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎಲ್.ಕೆ ಅತೀಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗಳಾದ ಡಾ. ಎನ್. ಮಂಜುಳ, ಬೆಳಗಾವಿ ಉತ್ತರ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಎನ್.ಸತೀಶ ಕುಮಾರ ಅವರು ಇರಲಿದ್ದಾರೆ.
ಸಂಗೊಳ್ಳಿ ರಯಣ್ಣ ಪ್ರತಿಮೆಗೆ ಪ್ರಾತಃ ಕಾಲದ ಪೂಜೆ:
ಸಂಗೊಳ್ಳಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ದೇವಸ್ಥಾನದಲ್ಲಿ ಜನವರಿ 12 ರಂದು ಬೆಳಿಗ್ಗೆ 6 ಗಂಟೆಗೆ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಪ್ರಾತಃ ಕಾಲದ ಪೂಜಾ ಕಾರ್ಯಕ್ರಮದ ನಡೆಯಲಿದೆ. ಸಂಗೊಳ್ಳಿಯ ಹಿರೇಮಠ ಶ್ರೀ ಗುರು ಸಿದ್ದಲಿಂಗೇಶ್ವರ ಸಂಸ್ಥಾನದ ಶ್ರೀ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಅದೇ ದಿನ ಬೆಳಿಗ್ಗೆ 10 ಗಂಟೆಗೆ ಅರ್ಚಕರಾದ ಬಸವರಾಜ ಡೊಳ್ಳಿನ ಅವರಿಂದ ಕಿತ್ತೂರು ಸಂಸ್ಥಾನದ ಧ್ವಜಾರೋಹನ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವದು. ಇದೇ ವೇಳೆ ಜಲ ಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಸಂಗೊಳ್ಳಿ ರಾಯಣ್ಣ ಜ್ಯೋತಿ ಬರಮಾಡಿಕೊಂಡು ಧ್ವಜಾರೋಹನ ನಿರ್ವಹಿಸಲಿದ್ದಾರೆ.
ವಾಸ್ತು ಪ್ರದರ್ಶನ ಜಾನಪದ ಕಲಾವಾಹಿನಿ ಉದ್ಘಾಟನೆ:
ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನದಲ್ಲಿ ಬೆಳಿಗ್ಗೆ 10.15 ಗಂಟೆಗೆ ಸಂಸದೆ ಮಂಗಳಾ ಅಂಗಡಿ ಅವರು ಜನಪದ ಕಲಾವಾಹಿನಿ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಸಂಗೊಳ್ಳಿಯ ಸರ್ಕಾರಿ ಮೈದಾನದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೇದಿಕೆಯಲ್ಲಿ ಬೆಳಗಾವಿ ಕಾಡಾ, ಮಲಪ್ರಭಾ ಮತ್ತು ಘಟಪ್ರಭಾ ಯೋಜಗಳ ಅಧ್ಯಕ್ಷ ಡಾ. ವಿಶ್ವನಾಥ ಪಾಟೀಲ ಅವರು ವಸ್ತು ಪ್ರದರ್ಶನ ಉದ್ಘಾಟಿಸಲಿದ್ದಾರೆ. ವೀರರ ಸ್ಮರಣೆಗಾಗಿ ದೀಪೋತ್ಸವ ಕಾರ್ಯಕ್ರಮ ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನ ಆವರಣದಲ್ಲಿ ರಾತ್ರಿ 9 ಗಂಟೆಗೆ ನಡೆಯಲಿದೆ.
ನಂದಗಡ ಉತ್ಸವ:
ಜ.12 ರಂದೇ ಖಾನಾಪುರ ತಾಲೂಕಿನ ನಂದಗಡದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಐಕ್ಯಸ್ಥಳದಲ್ಲಿ ಸಂಜೆ 5 ಗಂಟೆಗೆ ನಂದಗಡ ಉತ್ಸವ ಕಾರ್ಯಕ್ರಮ ನಡೆಯಲಿದೆ. ನಂದಗಡ ವಿರಕ್ತಮಠದ ಶ್ರೀ ಚನ್ನವೀರ ಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಖಾನಾಪುರ ವಿಧಾನಸಭಾ ಮತಕ್ಷೇತ್ರದ ಶಾಸಕಿ ಅಂಜಲಿ ನಿಂಬಾಳಕರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ವಿಶೇಷ ಆಮಂತ್ರಿತರಾಗಿ ಆಗಮಿಸಲಿದ್ದಾರೆ.
ನಂದಗಡ ಗ್ರಾಮ ಪಂಚಾಯತ್ ಅಧ್ಯಕ್ಷೆ ನಿರ್ಮಲಾ ಜೋಡಂಗಿ ಉಪಸ್ಥಿತರಿರಲಿದ್ದು, ನಂದಗಡ ಮಹಾತ್ಮ ಗಾಂಧಿ ಕಾಲೇಜಿನ ಉಪನ್ಯಾಸಕ ಎಸ್. ಡಿ ಕಟಗಿ ಅವರು ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮ:
ಸಂಗೊಳ್ಳಿ ಸರ್ಕಾರಿ ಮೈದಾನದ ವೇದಿಕೆ ಕಾರ್ಯಕ್ರಮದಲ್ಲಿ ಸಂಜೆ 6 ಗಂಟೆಯಿಂದ ಜನಪದ ಸಂಗೀತ, ಸಂಗೀತ, ಡೊಳ್ಳಿನ ಹಾಡು, ಮಂಗಲವಾದ್ಯ, ಭಜನೆ, ತತ್ವಪದ, ಶಾಸ್ತ್ರೀಯ ಸಂಗೀತ, ಹಾಸ್ಯ ಸಂಜೆ, ವಚನ ಸಂಗೀತ, ನೃತ್ಯ ರೂಪಕ, ನಾಟಕ ಹಾಗೂ ರಸಮಂಜರಿ ಕಾರ್ಯಕ್ರಮ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಅದೇ ರೀತಿಯಲ್ಲಿ ಜ.13 ರಂದು ಸಂಗೊಳ್ಳಿಯ ಸರ್ಕಾರಿ ಮೈದಾನದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೇದಿಕೆ ಕಾರ್ಯಕ್ರಮದಲ್ಲಿ ಸಂಜೆ 6 ಗಂಟೆಯಿಂದ ಶಹನಾಯಿ ವಾದನ, ತತ್ವಪದ, ಸುಗಮ ಸಂಗೀತ, ಭಾವಗೀತೆಗಳು, ಮಾತನಾಡುವ ಗೊಂಬೆ, ಸಂಗೊಳ್ಳಿ ರಾಯಣ್ಣ ನೃತ್ಯ, ಸಂಗೊಳ್ಳಿ ರಾಯಣ್ಣ ರೂಪಕ, ಬಯಲಾಟ ಸೇರಿದಂತೆ ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಜ.13ರಂದೇ ಸಂಗೊಳ್ಳಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನದಲ್ಲಿ ಮಧ್ಯಾಹ್ನ 12 ಗಂಟೆಗೆ ವಿಚಾರ ಸಂಕೀರ್ಣ ಕಾರ್ಯಕ್ರಮ ನಡೆಯಲಿದೆ. ಹಿರಿಯ ಸಾಹಿತಿ ಯ.ರು ಪಾಟೀಲ ಅವರು ಅಧ್ಯಕ್ಷತೆ ವಹಿಸಲಿದ್ದು, ಸಂಗೊಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಇನಾಮಹುಸೇನ ಬುಡ್ಡೆಸಾಬ ಖುದ್ದುನವರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಬೈಲಹೊಂಗಲದ ಅಕ್ಕಮಹಾದೇವಿ ಮಹಿಳಾ ಪದವಿ ಕಾಲೇಜಿನ ಪ್ರಾಚಾರ್ಯರಾದ ಡಾ.ಸಿ. ಬಿ ಗಣಾಚಾರಿ ಅವರು ಗೌರವ ಉಪಸ್ಥಿತರಿರುವರು. ರಾಯಣ್ಣನ ನಂತರ ಕಿತ್ತೂರು ಸಂಸ್ಥಾನದ ಹೋರಾಟದ ವಿಷಯದ ಕುರಿತು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಪ್ರಧ್ಯಾಪಕ ಡಾ.ಎಸ್. ಎಮ್ ಗಂಗಾಧರಯ್ಯ, ಸಹಾಯಕ ಪ್ರಾಧ್ಯಾಪಕ, ಪ್ಲಿಟರು ಸಂಗ್ರಹಿಸಿದ ಲಾವಣಿಗಳಲ್ಲಿ ಸಂಗೊಳ್ಳಿ ರಾಯಣ್ಣ ವಿಷಯದ ಕುರಿತು ಸಹಾಯಕ ಪ್ರಾಧ್ಯಾಪಕ ಡಾ. ಗಜಾನನ ನಾಯ್ಕ ಹಾಗೂ ಪ್ರಸ್ತುತ ಸಮಾಜಕ್ಕೆ ರಾಯಣ್ಣನ ವ್ಯಕ್ತಿತ್ವದ ಪ್ರೇರಣೆ ವಿಷಯದ ಕುರಿತು ಯುವ ಬರಹಗಾರ ಸಂಗಮೇಶ್ವರ ಕುಲಕರ್ಣಿ ವಿಚಾರ ಸಂಕೀರ್ಣದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅದೇ ದಿನ ಮಧ್ಯಾಹ್ನ 3 ಗಂಟೆಗೆ ಸಂಗೊಳ್ಳಿಯ ಗ್ರಾಮ ಪಂಚಾಯತ್ ಆವರಣದಲ್ಲಿ ಕ್ರೀಡಾ ಕಾರ್ಯಕ್ರಮಗಳು ನಡೆಯಲಿದ್ದು, ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಅವರು ಉದ್ಘಾಟಿಸಲಿದ್ದಾರೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಉತ್ಸವ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ದರ್ಶನ್ ಎಚ್ .ವಿ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಶಿಧರ ಬಗಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕ ವಿದ್ಯಾವತಿ ಭಜಂತ್ರಿ, ಹಾಗೂ ಸಂಗೊಳ್ಳಿ ರಾಯಣ್ಣ ಉತ್ಸವದ ಎಲ್ಲಾ ಉಪ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.