Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

15,000 ಪದವೀಧರ ಶಿಕ್ಷಕರ ನೇಮಕಾತಿ: 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಸಿದ್ಧ


ಬೆಂಗಳೂರು: 15,000 ಪದವೀಧರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಈ ವಾರದಲ್ಲಿ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ ತಿಳಿಸಿದ್ದಾರೆ.

ಆರರಿಂದ ಎಂಟನೇ ತರಗತಿಗೆ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಗತಿಯಲ್ಲಿದ್ದು, ಅಂತಿಮ ಹಂತ ತಲುಪುತ್ತಿದೆ. ಈ ಹಿಂದೆ 1:2 ಅನುಪಾತದಲ್ಲಿ ಆಯ್ಕೆ ಪಟ್ಟಿ ಪ್ರಕಟಿಸಿ ದಾಖಲಾತಿ ಪರಿಶೀಲನೆ ಮಾಡಲಾಗಿತ್ತು. ನಂತರದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು 1:1 ಅನುಪಾತದಲ್ಲಿ ಸಿದ್ದಪಡಿಸಲಾಗಿದ್ದು, ತಾತ್ಕಾಲಿಕ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ.

ಈ ಪಟ್ಟಿಗೆ ಆಕ್ಷೇಪಣೆಗಳನ್ನು ಆಹ್ವಾನಿಸಿದ ನಂತರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು ಎಂದು ಸಚಿವ ನಾಗೇಶ ಮಾಹಿತಿ ನೀಡಿದ್ದಾರೆ.


Leave a Reply