ಬೆಳಗಾವಿ ಅಧಿವೇಶನದಲ್ಲೇ ಸದಾಶಿವ ವರದಿ ಮಂಡಿಸಲು ಮನವಿ

A B Dharwadkar
ಬೆಳಗಾವಿ ಅಧಿವೇಶನದಲ್ಲೇ ಸದಾಶಿವ ವರದಿ ಮಂಡಿಸಲು ಮನವಿ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿಯೇ ಎಜೆ ಸದಾಶಿವ ಆಯೋಗದ ವರದಿ ಮಂಡಿಸಿ ಒಳ ಮೀಸಲಾತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ತಿಳಿಸಿದ್ದಾರೆ.

ಒಳ ಮೀಸಲಾತಿ ಸಂಬಂಧ ಸದಾಶಿವ ಆಯೋಗದ ವರದಿ ಜಾರಿ ಕುರಿತಂತೆ ಪರಿಶಿಷ್ಟ ಜಾತಿಗೆ ಸೇರಿದ ಸಚಿವರು ಮತ್ತು ಶಾಸಕರ ಸಭೆಯ ಬಳಿಕ ಅವರು ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಒಳ ಮೀಸಲಾತಿ ಕುರಿತು ಚಿತ್ರದುರ್ಗ ನಗರದಲ್ಲಿ ಎಸ್ಸಿಎಸ್ಟಿ ಸಮಾವೇಶ ನಡೆಸಲಾಗಿತ್ತು. ಆಗ ಹತ್ತು ಹಲವು ಘೋಷಣೆಗಳನ್ನು ಮಾಡಿದ್ದೆವು. ಅದರಲ್ಲಿ ಸದಾಶಿವ ಆಯೋಗದ ವರದಿಯನ್ನು ಮೊದಲ ಅಧಿವೇಶನದಲ್ಲಿಯೇ ಸದನದ ಮುಂದಿಡಲಾಗುವುದು ಎಂದು ಭರವಸೆ ನೀಡಲಾಯಿತು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗಿಲ್ಲ ಎಂದರು.

ಸಚಿವರಾದ ಪ್ರಿಯಾಂಕ ಖರ್ಗೆ. ಡಾ. ಎಚ್ಸಿ ಮಹದೇವಪ್ಪ, ಕೆಎಚ್ ಮುನಿಯಪ್ಪ ಮತ್ತು ನಮ್ಮಲ್ಲಿ ಕೆಲವರು ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಬಗ್ಗೆ ಸಮಾಜದ ಮುಖಂಡರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ನ್ಯಾ. ಸದಾಶಿವ ಆಯೋಗದ ವರದಿಯಂತೆ ಒಳ ಮೀಸಲಾತಿ ವಿಚಾರವಾಗಿ ತೀವ್ರ ಸ್ವರೂಪದ ಹೋರಾಟ ನಡೆಸಿ, ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮಾದಿಗ ಸಮುದಾಯದ ಮುಖಂಡರಿಗೆ ಆಹಾರ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಸೋಮವಾರ ಕರೆ ನೀಡಿದ್ದರುಸದಾಶಿವ ಆಯೋಗದ ಶಿಫಾರಸು ಜಾರಿಗಾಗಿ ತೀವ್ರ ಆಂದೋಲನದ ಅಗತ್ಯವಿದೆ. ನಿಮ್ಮ ಸ್ಥಳೀಯ ಶಾಸಕರ ಮನೆಗೆ ಮುತ್ತಿಗೆ ಹಾಕಿ. ಅವರಿಗೆ ಕಾರ್ಯಕ್ರಮಗಳನ್ನು ನಡೆಸಲು ಬಿಡಬೇಡಿ. ಸಚಿವನಾಗಿದ್ದುಕೊಂಡೇ ನಾನು ನಿಮಗೆ ರೀತಿ ಹೇಳುತ್ತಿದ್ದೇನೆ ಎಂದು ಕರ್ನಾಟಕ ಆದಿಜಾಂಬವ ಸಾಂಸ್ಕೃತಿಕ ಸಮಿತಿಯ ಮುಖಂಡರ ಸಭೆಯಲ್ಲಿ ಮುನಿಯಪ್ಪ ಅವರು ತಮ್ಮ ಭಾಷಣದಲ್ಲಿ ಹೇಳಿದ್ದರು.

 

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.