Please assign a menu to the primary menu location under menu

State

ಪಂಚಮಸಾಲಿ ಮೀಸಲಾತಿಗೆ ಯಡಿಯೂರಪ್ಪ ಅಡ್ಡಗಾಲು ಹಾಕಿಲ್ಲ : ಸಚಿವ ಮುರುಗೇಶ ನಿರಾಣಿ


ಬೆಂಗಳೂರು : ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸುವ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅಡ್ಡಗಾಲು ಹಾಕಿಲ್ಲ. ಈ ಬಗ್ಗೆ ಕೇಳಿ ಬಂದಿರುವ ಆರೋಪ ಸತ್ಯಕ್ಕೆ ದೂರವಾದುದು ಎಂದು ಸಚಿವ ಡಾ.ಮುರುಗೇಶ ಆರ್.ನಿರಾಣಿ ತಿಳಿಸಿದ್ದಾರೆ.

ಯಡಿಯೂರಪ್ಪನವರು ತಮ್ಮ ಸಮುದಾಯಕ್ಕೆ ಮೀಸಲಾತಿ ಕೊಡಲು ಅಡ್ಡಿಯಾಗಿದ್ದಾರೆ. ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಮೇಲೆ ಒತ್ತಡ ಹಾಕಿದ್ದಾರೆ ಎಂದು ಪಂಚಮಸಾಲಿ ಸಮುದಾಯದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿಗಳು ಆರೋಪಿಸಿದ್ದರು.

ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ನಿರಾಣಿ ಅವರು, ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಒದಗಿಸಲು ನಮ್ಮ ನಾಯಕರಾದ ಯಡಿಯೂರಪ್ಪನವರು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆಯೇ ಹೊರತು, ಅಡ್ಡಿಪಡಿಸುವ ಕೆಲಸವನ್ನು ಎಂದೂ ಮಾಡಿಲ್ಲ, ಎಂದು ಅವರು ಪುನರುಚ್ಚರಿಸಿದರು.

ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಆರ್ಥಿಕವಾಗಿ ಹಿಂದುಳಿದಿರುವ ಪಂಚಮಸಾಲಿ ಸಮುದಾಯವನ್ನು ಅಭಿವೃದ್ಧಿಪಡಿಸುವ ಸದ್ದುದ್ದೇಶದಿಂದ ಪ್ರಾಧಿಕಾರ ರಚಿಸಿ 500 ಕೋಟಿ ರೂ. ಅನುದಾನವನ್ನು ಕೊಟ್ಟಿದ್ದರು. ಸಂಪುಟ ಉಪಸಮಿತಿಯನ್ನು ಮಾಡಿದ್ದು ಸಹ ಯಡಿಯೂರಪ್ಪನವರು. ಅವರ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಬಾರದು ಎಂದರು.


Samadarshi News

Leave a Reply