ಕಾರವಾರ : ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ನಡೆದಿದೆ.
ಶಾಲಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಇಂದು ಸಂಜೆ ಮುರುಡೇಶ್ವರದ ಕಡಲ ತೀರದಲ್ಲಿ ಆಟವಾಡುತ್ತಿದ್ದರು. ಈ ವೇಳೆ ರಭಸವಾಗಿ ಅಬ್ಬರಿಸಿದ ಅಲೆಗಳ ಹೊಡೆತಕ್ಕೆ ಸಿಲುಕಿದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಓರ್ವ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಶ್ರಾವಂತಿ (15) ಶವ ಪತ್ತೆಯಾಗಿದ್ದು, ಯಶೋಧಾ ಹಾಗೂ ವೀಕ್ಷಣಾ ಸೇರಿ ಮೂವರು ವಿದ್ಯಾರ್ಥಿನಿಯರನ್ನು ರಕ್ಷಿಸಲಾಗಿದೆ. ದೀಕ್ಷಾ ಲಾವಣ್ಯ ಹಾಗೂ ಲಿಪಿಕಾ ಎಂಬ ಮೂವರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಮೂವರು ವಿದ್ಯಾರ್ಥಿನಿಯರ ಪತ್ತೆಗಾಗಿ ಸಮುದ್ರದಲ್ಲಿ ಶೋಧಕಾರ್ಯ ಮುಂದುವರೆದಿದೆ.
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೊತ್ತೂರು ಶಾಲೆಯ 46 ವಿದ್ಯಾರ್ಥಿಗಳು ಹಾಗೂ 6 ಶಿಕ್ಷಕರು ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದರು. ಈ ವೇಳೆ ಕಡಲ ನೀರಲ್ಲಿ ಆಡುವ ವೇಳೆ ಈ ದುರಂತ ಸಂಭವಿಸಿದೆ.