‘ಸರ್ವ ಜನಾಂಗದ ಶಾಂತಿಯ ತೋಟ’ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ, ಪಿಎಫ್ಐ ನಿಷೇಧ ಸೇರಿ ಹಲವು ಭರವಸೆ

A B Dharwadkar
‘ಸರ್ವ ಜನಾಂಗದ ಶಾಂತಿಯ ತೋಟ’ ಕಾಂಗ್ರೆಸ್  ಪ್ರಣಾಳಿಕೆಯಲ್ಲಿ ಬಜರಂಗದಳ, ಪಿಎಫ್ಐ ನಿಷೇಧ ಸೇರಿ ಹಲವು ಭರವಸೆ
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ಬೆಂಗಳೂರು,ಮೇ 2: ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ ಸಮಾಜ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಣಾಳಿಕೆ ತಿಳಿಸಿದೆ.

 

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ನಗರದ ಖಾಸಗಿ ಹೋಟೆಲ್‌ ನಲ್ಲಿ 2023 ರ ಕಾಂಗ್ರೆಸ್‌ ಚುನಾವಣೆಯನ್ನು ಬಿಡುಗಡೆ ಮಾಡಿದರು. ಇದರಲ್ಲಿ ಜನರಿಗೆ ಬಹಳಷ್ಟು ಭರವಸೆಗಳನ್ನು ನೀಡಲಾಗಿದ್ದು ಮತೀಯ ದ್ವೇಷ ಬಿತ್ತುವ ಸಂಘಟನೆ ಹಾಗೂ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದಲ್ಲದೇ ಅಂತಹ ಸಂಘಟನೆಗಳ ವಿರುದ್ಧ ನಿಷೇಧ ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರಾಜ್ಯದ ಜನರಿಗೆ ಭರವಸೆ ನೀಡಲಾಗಿದೆ.

ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗ ಬಜರಂಗದಳ ಮತ್ತು ಪಿ.ಎಫ್.ಐಗಳು ಸೇರಿದಂತೆ ಬಹುಸಂಖ್ಯಾತರಾಗಲಿ ಅಥವಾ ಅಲ್ಪಸಂಖ್ಯಾತರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಸಂವಿಧಾನ ವಿರೋಧಿ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್‌ ಬಿಡುಗಡೆ ಮಾಡಿದ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ, ರಣದೀಪ ಸಿಂಗ್ ಸುರ್ಜೆವಾಲಾ, ಡಾ ಜಿ ಪರಮೇಶ್ವರ ಆದಿ ನಾಯಕರ ಸಮ್ಮುಖದಲ್ಲಿ ಬಿಡುಗಡೆಯಾಯಿತು. ‘ಸರ್ವ ಜನಾಂಗದ ಶಾಂತಿಯ ತೋಟ, ಇದುವೇ ಕಾಂಗ್ರೆಸ್‌ ಬದ್ದತೆ’ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಕಾಂಗ್ರೆಸ್‌ ಬರಲಿದೆ ಪ್ರಗತಿ ತರಲಿದೆ ಎಂದು ಘೋಷ ವಾಕ್ಯವನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ.

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಿಸಿರುವ ಪ್ರಮುಖ ಯೋಜನೆಗಳು:

  • ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್​, ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ, ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ, ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು, ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ,
  • ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ನೌಕರರಿಗೆ ಖಾಯಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ,
  •  ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ,
  • ಅಂಗನವಾಡಿ ಕಾರ್ಯಕರ್ತೆಯರ ವೇತನ 11,500ರಿಂದ 15 ಸಾವಿರಕ್ಕೆ ಹೆಚ್ಚಳ,  ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ, ಬಿಸಿಯೂಟ ನೌಕರರ ಮಾಸಿಕ ಗೌರವಧನ 6 ಸಾವಿರ ರೂ.ಗೆ ಹೆಚ್ಚಳ,
  • ರಾತ್ರಿ ಪಾಳಿಯ ಪೊಲೀಸ್​ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ, ಎಲ್ಲಾ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ವೇತನ ಹೆಚ್ಚುವರಿ ಪಾವತಿ, ಆದ್ಯತೆಯ ಮೇರೆಗೆ ಕಾಲ ಕಾಲಕ್ಕೆ ಎಲ್ಲಾ ಖಾಲಿ ಹುದ್ದೆಗಳ ಭರ್ತಿ,
  • ನಾಲ್ಕು ವರ್ಷದೊಳಗೆ ಎಲ್ಲಾ ಪೊಲೀಸ್ ಸಿಬ್ಬಂದಿಗೂ ವಸತಿ ಸೌಲಭ್ಯ, ಪ್ರತಿ ಜಿಲ್ಲೆಯಲ್ಲೂ ಸುಸಜ್ಜಿತ ಸೈಬರ್ ಪೊಲೀಸ್ ಠಾಣೆಗಳ ನಿರ್ಮಾಣ, ಕನಕಪುರದಲ್ಲಿ ವಿಶ್ವದರ್ಜೆಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಭರವಸೆಯನ್ನು ಕಾಂಗ್ರೆಸ್ ನೀಡಿದೆ.
  • ಬಿಬಿಎಂಪಿ ನಿರ್ವಹಣೆಗಾಗಿಯೇ ಸಮಗ್ರ ಶಾಸನ ಜಾರಿ, ಒಂದೇ ವೇದಿಕೆ ಅಡಿ ಸಾರಿಗೆ ವಿದ್ಯುತ್ ವಸತಿ ಒಳಚರಂಡಿ, ನೀರು ಸರಬರಾಜು ಸೌಕರ್ಯ, ಬೆಂಗಳೂರು ನಗರದ ವಿವಿಧ ಪ್ರದೇಶಗಳಿಗೆ ರಾತ್ರಿ 1 ಗಂಟೆ ತನಕ ಬಸ್ ವ್ಯವಸ್ಥೆ, NEP ರದ್ದು ಮಾಡಿ ಕರ್ನಾಟಕ ಶಿಕ್ಷಣ ನೀತಿಯ ಅನುಷ್ಠಾನ,
  • ಸರ್ಕಾರದಿಂದಲೇ ಮನೆಗಳ ನಿರ್ಮಾಣ, ಮಂಗಳಮುಖಿರಿಗಾಗಿ ಮಂಡಳಿ ಸ್ಥಾಪನೆ (100 ಕೋಟಿ ಅನುದಾನ), ಆಟೋ ಚಾಲಕರ ಮಂಡಳಿ ಹಾಗೂ ಟ್ಯಾಕ್ಸಿ ಚಾಲಕರ ಮಂಡಳಿ ಸ್ಥಾಪನೆ, ಪತ್ರಕರ್ತರ ಕಲ್ಯಾಣ ನಿಧಿಗೆ 500 ಕೋಟಿ ರೂ ಮೀಸಲು (ಪತ್ರಕರ್ತರಿಗೆ ಸಾಮಾಜಿಕ ಭದ್ರತಾ ಯೋಜನೆ ಜಾರಿ, ಮೊದಲ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಮಂಡನೆ), SC-ST ಒಳ ಮೀಸಲಾತಿಗೆ ನ್ಯಾಯ ಕೊಡಿಸಲು ಕಾಂಗ್ರೆಸ್ ಬದ್ದ.
  • ಒಂದು ಬಾರಿಯ ನೆರವಿನ ರೂಪದಲ್ಲಿ ಬೀದಿ ವ್ಯಾಪಾರಿಗಳಿಗೆ 20 ಸಾವಿರ ಅನುದಾನ, ಹಿರಿಯ ನಾಗರಿಕರಿಗೆ ಎರಡು ವರ್ಷಕ್ಕೊಮ್ಮೆ ರಾಜ್ಯದ 15 ದೇಶದ 10 ಪವಿತ್ರ ಸ್ಥಳಗಳಿಗೆ ಉಚಿತ ಪ್ರವಾಸ, ಕಾಶಿ, ಮಥುರ, ಕೈಲಾಸ, ಮಾನಸ ಸರೋವರ ಯಾತ್ರೆಯ ಸಬ್ಸಿಡಿ ಹೆಚ್ಚಳ,
  • ವಿಶೇಷ ಚೇತನರಿಗೆ ಪ್ರತಿ ಜಿಲ್ಲೆಯಲ್ಲಿ ವಿಶೇಷ ಶಾಲೆ ಸ್ಥಾಪನೆ, ಅಂಗವಿಕಲ ಮಹಿಳೆಯರಿಗೆ ಸ್ವ ಉದ್ಯೋಗಕ್ಕೆ 3 ಲಕ್ಷದವರೆಗೂ ಬಡ್ಡಿ ರಹಿತ ಸಾಲ, ಎಸ್.ಸಿ ಎಸ್.ಟಿ ಮೀಸಲಾತಿ ಸೇರಿದಂತೆ ಶೇ.50 ರಿಂದ ಶೇ.75ಕ್ಕೆ ಏರಿಕೆಗೆ ಸೂಕ್ತ ಕ್ರಮ (ಎಸ್.ಸಿ ಮೀಸಲಾತಿ ಶೇ.17ಕ್ಕೆ ಏರಿಕೆ, ಎಸ್.ಟಿ ಮೀಸಲಾತಿ ಶೇ. 7ಕ್ಕೆ ಏರಿಕೆ. ಅಲ್ಪ ಸಂಖ್ಯಾತರಿಗೆ ಶೇ.4 ರ ಮೀಸಲಾತಿ ಮರು ಸ್ಥಾಪನೆ, ಹಿಂದುಳಿದ ವರ್ಗಗಳ ಜನಗಣತಿ ವರದಿ ಅನುಷ್ಠಾನ)

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.