ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ಇಂದು ನಡೆದ ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. ಕಾರ್ಯಕ್ರಮಕ್ಕೆ ಆಗಮಿಸಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕಾರ್ಯಕ್ರಮ ಮುಗಿಸಿದ ಬಳಿಕ ಸುದ್ದಿಗಾರರರಿಗೆ ಪ್ರತಿಕ್ರಿಯೆ ನೀಡುತ್ತಿದ್ದ ಸಂದರ್ಭದಲ್ಲಿ, ಏಕಾಏಕಿ ಧೂಳು ಮಿಶ್ರಿತ ಸುಂಟರಗಾಳಿಗೆ ಸಿಲುಕಿ ಕಾರ್ಯಕ್ರಮಕ್ಕೆ ಹಾಕಿದ್ದ ಬೃಹತ್ ಪೆಂಡಾಲ್ ಕುಸಿದು ಬಿದ್ದಿದೆ. ಸಚಿವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಪೆಂಡಾಲ್ ಕುಸಿಯುತ್ತಿದ್ದಂತೆಯೇ ಸಚಿವರು ಹಾಗೂ ಅಲ್ಲಿದ್ದವರು ಕ್ಷಣ ಕಾಲ ವಿಚಲಿತರಾದರು. ಅದೃಷ್ಟವಶಾತ್ ಸಚಿವರು ಹಾಗೂ ಯಾರಿಗೂ ಯಾವುದೇ ಗಾಯಗಳಾಗಿಲ್ಲ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಅಂಬೇಡ್ಕರ್ ಪ್ರತಿಮೆ ಉದ್ಗಾಟನೆ ವೇಳೆ ಬಂದ ಏಕಾಏಕಿ ಬಂದ ಸುಂಟರಗಾಳಿ; ಕೂದಲೆಳೆಯಲ್ಲಿ ಬದುಕುಳಿದ ಸತೀಶ್ ಜಾರಕಿಹೊಳಿ……!



