ನಿಪ್ಪಾಣಿ : ಹಿಂದೂ ಪದದ ಬಗ್ಗೆ ಹೇಳಿಕೆ ನೀಡಿರುವ ಶಾಸಕ ಸತೀಶ ಜಾರಕಿಹೊಳಿ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ ಬೆಂಬಲ ನೀಡಿರುವ ಘಟನೆ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ.
ಸತೀಶ ಜಾರಕಿಹೊಳಿ ಅವರ ತೇಜೋವಧೆ ಮಾಡಲಾಗುತ್ತಿದೆ ಎಂದು ಪ್ರತಿಭಟನೆ ನಡೆಸಿದರು. ಈ ವೇಳೆ ನಗರದ ಸಂಭಾಜಿ ವೃತ್ತದಲ್ಲಿ ಸತೀಶ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಲಾಯಿತು.
ನಿಪ್ಪಾಣಿಯ ಸಂಭಾಜಿ ಚೌಕದಿಂದ ತಹಶೀಲ್ದಾರ ಕಚೇರಿಯವರೆಗೆ ಪಾದಯಾತ್ರೆ ಮೂಲಕ ಸತೀಶ ಜಾರಕಿಹೊಳಿ ಬೆಂಬಲಿಸಿ ಮೆರವಣಿಗೆ ನಡೆಯಿತು.
ಐ ಸ್ಟ್ಯಾಂಡ್ ವಿಥ್ ಸತೀಶ ಜಾರಕಿಹೊಳಿ ಎಂಬ ಬರಹದ ಬಿತ್ತಿ ಪತ್ರ ಹಿಡಿದು ಮೆರವಣಿಗೆ ನಡೆಸಲಾಯಿತು.