ಬೆಂಗಳೂರು: ಹಿಂದೂ ಪದದ ಅರ್ಥ ಅಶ್ಲೀಲವಾಗಿದೆ ಎಂದು ಹೇಳಿಕೆ ನೀಡಿದ್ದ ಶಾಸಕ ಸತೀಶ ಜಾರಕಿಹೊಳಿ ವಿರುದ್ಧ ಬಗ್ಗೆ ಬಿಜೆಪಿ ಸೇರಿದಂತೆ ಜೆಡಿಎಸ್ ನಿಂದಲೂ ವ್ಯಾಪಕ ವಿರೋಧ, ಆಕ್ಷೇಪ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಶಾಸಕ ಸತೀಶ ಜಾರಕಿಹೊಳಿ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದು, ಜನತೆಯಲ್ಲಿ ವಿಷಾದವನ್ನು ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಹಿಂದೂ ಪದದ ಬಗ್ಗೆ ತಾವು ಹೇಳಿದ್ದ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಈ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದಿದ್ದಾರೆ.
ಶಾಸಕ ಸತೀಶ ಜಾರಕಿಹೊಳಿ ಹೇಳಿಕೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಪತ್ರವನ್ನು ಬರೆದಿದ್ದಾರೆ. ಆ ಪತ್ರದಲ್ಲಿ ತಮ್ಮ ಹೇಳಿಕೆಯಲ್ಲಿ ತಪ್ಪು ಇದೆಯಾ ಎನ್ನುವ ಬಗ್ಗೆ ತನಿಖೆ ನಡೆಸುವಂತೆಯೂ ಕೋರಿದ್ದಾರೆ.
ಪತ್ರದಲ್ಲಿ ಹಿಂದೂ ಪದದ ಬಗ್ಗೆ ನೀಡಿರುವ ಹೇಳಿಕೆ ಬಗ್ಗೆ ತಂಡ ರಚನೆ ಮಾಡಿ ತನಿಖೆ ಮಾಡುವಂತೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಸದುದ್ದೇಶದಿಂದ ಅಂದು ನಾನು ಹೇಳಿದ ಆ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ ಮತ್ತು ಈ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.