ರೊಚ್ಚಿಗೆಬ್ಬಿಸುವಂಥ ರಮೇಶ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಯಿಸಲಾರೆ -ಸವದಿ

A B Dharwadkar
ರೊಚ್ಚಿಗೆಬ್ಬಿಸುವಂಥ ರಮೇಶ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಯಿಸಲಾರೆ -ಸವದಿ

ವಿಜಯಪುರ: ರಮೇಶ ಜಾರಕಿಹೊಳಿ ಅವರು ರೊಚ್ಚಿಗೆಬ್ಬಿಸುವ ಹೇಳಿಕೆ ನೀಡುತ್ತಿದ್ದು ಕಾರಣ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ. 140 ಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಗೆದ್ದು ಕಾಂಗ್ರೆಸ್ ಸುಭದ್ರ ಸರ್ಕಾರ ರಚನೆ ಆಗಲಿದ್ದು ನಿತ್ಯ ಸೂರ್ಯಚಂದ್ರ ನಿತ್ಯ ಹುಟ್ಟುವಷ್ಟೇ ಕಾಂಗ್ರೆಸ್ ಸರ್ಕಾರ ರಚನೆಯಾಗುವುದು ಖಚಿತ ಎಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಲಕ್ಷ್ಮಣ ಸವದಿ ತಿಳಿಸಿದರು.

ಬಿಜೆಪಿ ಆಂತರಿಕ ಕಚ್ಚಾಟದಿಂದ ಕಂಗೆಟ್ಟಿದ್ದು, ಬಹುತೇಕ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳಿಗೆ ವಲಸೆ ಹೋಗಿದ್ದಾರೆ. ಹೀಗಾಗಿ ಬಿಜೆಪಿ ಚುನಾವಣೆಯಲ್ಲಿ 60ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವುದು ಕಠಿಣವಾಗಿದೆ ಎಂದರು.

ಬಸನಗೌಡ ಪಾಟೀಲ ಯತ್ನಾಳರಂಥವರ ಮಾತಿಗೆ ಉತ್ತರಿಸಲಾರೆ. ಬಿಜೆಪಿ ನಾಯಕರು ಹಿಂದೂಗಳನ್ನು ಖರೀದಿ ಮಾಡಿಲ್ಲ ಎಂದು ಪ್ರತಿಕ್ರಿಯಿಸಿದರು. ನಾನು ಈಗಾಗಲೇ ಗದಗ, ಕೊಪ್ಪಳ, ಬೆ ಳಗಾವಿ ಪ್ರಚಾರ ಮುಗಿಸಿದ್ದು, ವಿಜಯಪುರ ಜಿಲ್ಲೆಯಲ್ಲಿ ಪ್ರಚಾರ ನಡೆಸಿದ್ದೇನೆ. ಬಾಗಲಕೋಟ, ಕಲಬುರಗಿ ಜಿಲ್ಲೆಯ ಪ್ರವಾಸ ಮಾಡಲಿದ್ದು, ಪಕ್ಷ ಸೂಚಿಸುವ ಸ್ಥಳದಲ್ಲಿ ಪ್ರಚಾರ ಮಾಡಲಿದ್ದೇನೆ ಎಂದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.