This is the title of the web page

ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಇನ್ನು ಮುಂದೆ ಶಾಲಾ ಶಿಕ್ಷಣ ಇಲಾಖೆ ಎಂದು ಮರು ನಾಮಕರಣ 

 

 

ಬೆಂಗಳೂರು : ಸರ್ಕಾರವು ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಸರು ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಎಂದು ಮರು ನಾಮಕರಣ ಮಾಡಲು ತೀರ್ಮಾನಿಸಿದೆ.

ಬ್ರಿಟಿಷರ ಕಾಲದ ಅಂದಿನ ಅಧಿಕಾರಿಗಳು ಸಾರ್ವಜನಿಕ ಶಿಕ್ಷಣ ಇಲಾಖೆ ಎಂದು ನಾಮಕರಣ ಮಾಡಿದ್ದರು. ಅಂದಿನಿಂದ ಇಂದಿನವರೆಗೂ ಸಾರ್ವನಿಕ ಶಿಕ್ಷಣ ಇಲಾಖೆ ಎಂದೇ ಕರೆಯಲಾಗುತ್ತಿದೆ. ಇನ್ನು ಮುಂದೆ ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಶಾಲಾ ಶಿಕ್ಷಣ ಎಂದು ಬದಲಾವಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಶಿಕ್ಷಣ ವ್ಯವಸ್ಥೆಯೇ ಬದಲಾಗುತ್ತಿದ್ದು, ಅದರ ಪೂರ್ವಭಾವಿಯಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೆಸರು ಸಹ ಬದಲಾವಣೆ ಮಾಡಲು ನಿರ್ಧರಿಸಲಾಗಿದೆ.

You might also like
Leave a comment