ಬೆಳಗಾವಿ 27: ಬೆಳಗಾವಿಯ ಹಿರಿಯ ಪತ್ರಕರ್ತರಾದ ಎಂ. ಎನ್. ಪಾಟೀಲ ಅವರು ನಿನ್ನೆ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.
ಪಾಟೀಲ ಅವರು ಯು.ಎನ್. ಐ. ಸುದ್ದಿ ಸಂಸ್ಥೆಯಲ್ಲಿ ವರದಿಗಾರರಾಗಿ, ನಂತರ ಡೆಕ್ಕನ್ ಹೆರಾಲ್ಡ್ ನಲ್ಲಿಯೂ ಸೇವೆ ಸಲ್ಲಿಸಿದ್ದಾರೆ. ಈಗ ಬೆಳಗಾವಿಯ ಲೋಕ ದರ್ಶನ ದಿನಪತ್ರಿಕೆಯಲ್ಲಿ ಸೇವೆ ಸಲ್ಲಿಸುತಿದ್ದರು.
ಮೃತರು ಪತ್ನಿ, ಇಬ್ಬರು ಮಕ್ಕಳು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ದಿವಂಗತರ ಅಂತ್ಯಕ್ರಿಯೆ ಬೆಳಗಾವಿಯ ಸದಾಶಿವನಗರ ರುದ್ರ ಭೂಮಿಯಲ್ಲಿ ಮಂಗಳವಾರ ಸಂಜೆ ನಾಲ್ಕು ಗಂಟೆಗೆ ಜರುಗಲಿದೆ.
ಬೆಳಗಾವಿಯ ಪತ್ರಕರ್ತರು ಎಂ. ಎನ್. ಪಾಟೀಲ ಅವರ ನಿಧನಕ್ಕಾಗಿ ಶೋಕ ವ್ಯಕ್ತಪಡಿಸಿ ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.



