ಕಾರವಾರ : ಹೊಟೇಲ್ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದು ರಷ್ಯಾದ ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಬಿದ್ದು ಗಾಯಗೊಂಡ ವ್ಯಕ್ತಿಯನ್ನು ರಷ್ಯಾದ ಪ್ರಜೆ ಇವಾನ್ ಡೆನೆವಾ (40) ಎಂದು ಗುರುತಿಸಲಾಗಿದ್ದು, ರಾತ್ರಿ ವೇಳೆ ಹೊಟೇಲಿನ ಬಾಲ್ಕನಿ ಮೇಲೆ ನಿಂತಿದ್ದಾಗ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಅವರನ್ನು ತಕ್ಷಣವೇ ಗೋವಾಕ್ಕೆ ಕರೆದೊಯ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಅವರು ಕದಂಬ ನೌಕಾ ನೆಲೆಯಲ್ಲಿ ಕೆಲಸ ಇದ್ದುದರಿಂದ ಕಾರವಾರಕ್ಕೆ ಬಂದಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ

