This is the title of the web page

ಮುಖ್ಯಮಂತ್ರಿ ಬೊಮ್ಮಾಯಿ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ

ಬೆಂಗಳೂರು, 11- ಕೊರೋನಾ ಕಾರಣ ಮನೆಯಲ್ಲೇ ಐಸೊಲೇಟ್ ಆಗಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಿನ್ನೆಯಷ್ಟೇ ಬೊಮ್ಮಾಯಿ ಅವರಿಗೆ ಕೊರೊನಾ ಪಾಸಿಟಿವ್ ಆಗಿರುವುದು ದೃಢಪಟ್ಟಿತ್ತು. ಬಳಿಕ ಹೋಮ್‍ ಐಸೋಲೇಶನ್‍ನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಿಗ್ಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಹಳೆ ಮದ್ರಾಸ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಮುಖ್ಯಮಂತ್ರಿಗಳ ಪುತ್ರ ಭರತ ಬೊಮ್ಮಾಯಿಗೂ ಕೋವಿಡ್ ಪಾಸಿಟಿವ್ ಆಗಿದೆ. ರೋಗ ಲಕ್ಷಣ ಇರುವ ಬಗ್ಗೆ ಟ್ವೀಟ್ ಮೂಲಕ ಭರತ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

You might also like
Leave a comment