Please assign a menu to the primary menu location under menu

National

ಮರಾಠಿ ಭಾಷೆಗೆ ಭಾಷಾ ಸ್ಥಾನಮಾನಕ್ಕಾಗಿ ಪ್ರಧಾನಿಗೆ ಪತ್ರ ಬರೆದ ಶಿಂಧೆ


ಮುಂಬೈ: ಮರಾಠಿ ಭಾಷೆಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಲು ಅನುಮತಿ ನೀಡಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಮಹಾರಾಷ್ಟ್ರ ಸರ್ಕಾರವು 2013ರ ನವೆಂಬರ್ 16 ರಂದು ಕೇಂದ್ರ ಸರ್ಕಾರಕ್ಕೆ ವಿವರವಾದ ಪ್ರಸ್ತಾವನೆಯನ್ನು ಕಳುಹಿಸಿತ್ತು ಎಂದು ಏಕನಾಥ ಶಿಂಧೆ ಪ್ರಧಾನಿಗೆ ಪತ್ರ ಬರೆದಿದ್ದಾರೆ.

ಈ ಪ್ರಸ್ತಾವನೆಯ ಸ್ಥಿತಿಗತಿಯ ಕುರಿತು ಮಹಾರಾಷ್ಟ್ರ ನಿಯಮಿತವಾಗಿ ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದೆ. ಮಹಾರಾಷ್ಟ್ರದ ಜನರು ಸಹಿ ಅಭಿಯಾನವನ್ನು ನಡೆಸಿದ್ದಾರೆ. ಈ ಬೇಡಿಕೆಯನ್ನು ಬೆಂಬಲಿಸಿ 1.20 ಲಕ್ಷ ಸಹಿಗಳನ್ನು ಸಂಗ್ರಹಿಸಲಾಗಿದೆ. ಇದನ್ನು ಭಾರತದ ರಾಷ್ಟ್ರಪತಿಗಳಿಗೆ ಕಳುಹಿಸಲಾಗಿದೆ ಎಂದು ಏಕನಾಥ ಶಿಂಧೆ ಹೇಳಿದ್ದಾರೆ.

ಈ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ. ಕಿಶನ್ ರೆಡ್ಡಿ ಈ ವರ್ಷದ ಫೆಬ್ರವರಿ 3ರಂದು ರಾಜ್ಯಸಭೆಗೆ ತಿಳಿಸಿದ್ದರು. ಈ ಪ್ರಸ್ತಾವನೆಯು ಬಹಳ ಸಮಯದಿಂದ ಪರಿಗಣನೆಯಲ್ಲಿದೆ. ಆದಷ್ಟು ಬೇಗ ಇದಕ್ಕೆ ಅನುಮೋದನೆಯನ್ನು ನೀಡಬೇಕು ಎಂದು ನಾನು ವಿನಂತಿಸುತ್ತೇನೆ ಎಂದು ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.


Samadarshi News

Leave a Reply