ಕಾರವಾರ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿಯಾಗಿ 23 ಜನ ಪ್ರಯಾಣಿಕರು ಗಾಯಗೊಂಡ ಘಟನೆ ಯಲ್ಲಾಪುರದ ಕಣ್ಣಿಗೇರಿ ಸಮೀಪ ಮಂಗಳವಾರ ಸಂಭವಿಸಿದೆ.
ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯ ಶಿರಸಿಯಿಂದ ಬೆಳಗಾವಿಗೆ ಬಸ್ ಸಂಚರಿಸುತ್ತಿತ್ತು.
ಬಸ್ ಚಾಲಕ ರೋಣದ ಅಶೋಕ ಹಾಗೂ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯಲ್ಲಾಪುರದ ಶಿಕ್ಷಕಿ ಭುವನೇಶ್ವರಿ ಅವರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ ಹಾಗೂ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ ಆಸ್ಪತ್ರೆಗೆ ಕಳುಹಿಸಲಾಗಿದೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.