ಬೆಂಗಳೂರು: ಬೆಂಗಳೂರಿನಲ್ಲಿ ಓರ್ವ ಬಿಲ್ಡರ್ ಮತ್ತು ಕಟ್ಟಡದ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಬಿಲ್ಡರ್ ಅಶೋಕ ಮತ್ತು ಕಟ್ಟಡದ ಮಾಲೀಕ ಶಿವಾ ರೆಡ್ಡಿ ಮೇಲೆ ಫೈರಿಂಗ್ ಮಾಡಲಾಗಿದೆ.
ಕೆಆರ್ ಪುರಂ ಸೀಗೆಹಳ್ಳಿ ಸಮೀಪದ ಹ್ಯಾಪಿ ಗಾರ್ಡನ್ ನಲ್ಲಿ ಘಟನೆ ನಡೆದಿದೆ. ಬಿಲ್ಡರ್ ಅಶೋಕ ಮೇಲೆ ಒಂದು ಸುತ್ತಿನ ಗುಂಡಿನ ದಾಳಿ ನಡೆಸಲಾಗಿದೆ. ಕಟ್ಟಡದ ಮಾಲೀಕ ಶಿವಾರೆಡ್ಡಿ ಮೇಲೆ ನಾಲ್ಕೈದು ಸುತ್ತು ಗುಂಡು ಹಾರಿಸಲಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಅಶೋಕ ಮತ್ತು ಶಿವಾರೆಡ್ಡಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಕೆಆರ್ ಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.