This is the title of the web page

ಬಿಜೆಪಿಯ ದ್ವೇಷ ರಾಜಕೀಯ ವಿರೋಧಿಸಲು ಸಿದ್ದರಾಮಯ್ಯ ಕರೆ

ಬೆಂಗಳೂರು, ೧೬- ವಿರೋಧ ಪಕ್ಷಗಳ ಮೇಲೆ ಬಿಜೆಪಿ ನಡೆಸುತ್ತಿರುವ ದ್ವೇಷ ರಾಜಕಾರಣ ಮತ್ತು ಸಂವಿಧಾನಾತ್ಮಕ ಸಂಸ್ಥೆಗಳ ದುರ್ಬಳಕೆಯನ್ನು ಎಲ್ಲ ವಿರೋಧ ಪಕ್ಷಗಳು ಒಟ್ಟಾಗಿ ಖಂಡಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಇಡಿ ಕ್ರಮ ಕೈಗೊಂಡಿರುವುದು ಹಾಗೂ ಪಕ್ಷದ ಮುಖಂಡರನ್ನು ಬಂಧಿಸಿರುವ ದೆಹಲಿ ಪೊಲೀಸರ ಕ್ರಮವನ್ನು ವಿರೋಧಿಸಿ ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜಭವನ ಮುತ್ತಿಗೆ ಪ್ರತಿಭಟನೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು,
ಬಿಜೆಪಿ ಸರ್ಕಾರವೂ ತನಿಖೆ ಹೆಸರಿನಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಇದರ ಹಿಂದೆ ದುರುದ್ದೇಶವಿದೆ. ಕಾಂಗ್ರೆಸ್ ಎಂದಿಗೂ ದ್ವೇಷ ರಾಜಕಾರಾಣ ಮಾಡಿಲ್ಲ. ಆದರೆ ಬಿಜೆಪಿ ಅದನ್ನು ಮಾಡುತ್ತಿದೆ.

ಸೋನಿಯಾ ಗಾಂಧಿ  ಮತ್ತು ರಾಹುಲ್ ಗಾಂಧಿ ಅವರ ಮೇಲೆ ಸುಳ್ಳು ಕೇಸ್ ಹಾಕಿ, ಅವರ ವರ್ಚಸ್ಸು ಕಡಿಮೆ ಮಾಡಲು ಪ್ರಯತ್ನ ಮಾಡುತ್ತಿದೆ. ಸತತ ಮೂರು ದಿನಗಳ ಕಾಲ 30 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ್ದಾರೆ. ಬಿಜೆಪಿ ಸರ್ಕಾರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಇಂತಹ ಕೆಲಸ ಮಾಡುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿರುವ ಕಾಂಗ್ರೆಸ್‌ ಪ್ರಧಾನ ಕಚೇರಿಯನ್ನು ಪೊಲೀಸರು ಆಕ್ರಮಿಸಿಕೊಂಡಿದ್ದಾರೆ. ಅಲ್ಲಿಗೆ ಕಾಂಗ್ರೆಸ್ ಶಾಸಕ, ಸಂಸದರನ್ನು, ಮುಖಂಡರನ್ನು ಹೋಗಲು ಬಿಡುತ್ತಿಲ್ಲ. ಹೋದವರ ಮೇಲೆ ಪೊಲೀಸರು ಹಲ್ಲೆ ಮಾಡಲಾಗುತ್ತಿದೆ. ಇಂತಹ ನೀಚ ಕೃತ್ಯಕ್ಕೆ ಬಿಜೆಪಿ ಕೈ ಹಾಕಿದೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದಿದ್ದಾರೆ.

 

 

You might also like
Leave a comment